BREAKING NEWS

ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಿಕೊಂಡು ಬಂದಿದ್ದಾರೆ : ಅಶ್ವತ್ಥ್ ನಾರಾಯಣ್‌

ಬೆಂಗಳೂರು : ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಅರ್ಹತೆ, ಯೋಗ್ಯತೆ ಇಲ್ಲ. ಭ್ರಷ್ಟಾಚಾರ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್​​ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.

ಜನರ ಮೇಲೆ ಪ್ರೀತಿ ಇಟ್ಟುಕೊಂಡು ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದಲ್ಲ. ಅಧಿಕಾರ, ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್​ನವರು ಗ್ಯಾರಂಟಿ ಕೊಟ್ಟಿದ್ದಾರೆ. ಕಾಂಗ್ರೆಸ್​ ಸರ್ಕಾರ ಬಂದ ಎರಡೇ ತಿಂಗಳಲ್ಲಿ ಜನ ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದರು.

ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ : ರಾಜ್ಯ ಕಾಂಗ್ರೆಸ್​ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ. ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವವರ ಬಗ್ಗೆ ಯಾಕೆ ಮಾತನಾಡಬೇಕು. ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇಂಥವರಿಂದ ಒಂದೇ ಒಂದು ಒಳ್ಳೆಯ ಕೆಲಸವನ್ನು ಬಯಸಲು ಸಾಧ್ಯವಿಲ್ಲ. ಇವರು ನಿರ್ನಾಮ ಆಗುವ ಹಾಗೇ ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಮಾರ್ಗದರ್ಶಿಯಾಗಿರಲಿ. ಗುಣಮಟ್ಟದ ಶಿಕ್ಷಣ ಹಾಗೂ ಆಡಳಿತದಲ್ಲಿ ತಮ್ಮ ತಾಕತ್ ತೋರಿಸಬೇಕು. ಮೋಸದ ಭಾಗ್ಯದಿಂದ ಅಧಿಕಾರ ಪಡೆದುಕೊಂಡಿದ್ದಾರೆ ಎಂದು ಹರಿಹಾಯ್ದರು.

lokesh

Recent Posts

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

54 mins ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

3 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

6 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

7 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

7 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

7 hours ago