ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.
ಶಾಸಕ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಿದ ಹಿಂದೂ ಕಾರ್ಯಕರ್ತರ ವಿರುದ್ಧ ಆಕ್ರೋಶ ಹೊರಹಾಕಿದರು. ಕಳೆದ ವಾರ ನಡೆದ ಸ್ಥಳೀಯ ಸಮಾರಂಭವೊಂದರಲ್ಲಿ ಮಾತನಾಡಿದ ಈ ಹೇಳಿಕೆಯ ಆಡಿಯೋ ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಹಿಂದೂ ಕಾರ್ಯಕರ್ತ ಸತ್ಯಜಿತ್ ಸುರತ್ಕಲ್ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದರು.
’24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಸಿದ್ದರಾಮಯ್ಯನವರಿಗೆ ನೀವು ಮತ ಕೇಳಿದ್ದೀರಿ. ಭಜರಂಗದಳದ ಮೇಲೆ ನಿಷೇಧ ಹೇರಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಯಾಚಿಸಿದ್ದೀರಿ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ’ ಎಂದು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲು ಕಾಂಗ್ರೆಸ್ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ.
2013 ರಿಂದ 2018ರ ಅವಧಿಯಲ್ಲಿ ಸಿದ್ದರಾಮಯ್ಯನವರ ಆಳ್ವಿಕೆಯಲ್ಲಿ ಕರಾವಳಿ ಕರ್ನಾಟಕ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳು ನಡೆದಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸುವ ಮೂಲಕ ಆರೋಪಿಗಳನ್ನು ರಕ್ಷಿಸಿದೆ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ಇದನ್ನು 2018ರ ಚುನಾವಣಾ ವಿಷಯವಾಗಿಸಿತ್ತು ಮತ್ತು ಕರಾವಳಿ ಪ್ರದೇಶದಲ್ಲಿ ಚುನಾವಣೆಗಳನ್ನು ಗೆದ್ದಿತ್ತು.ಆಗ ಆರೋಪಿಗಳಿಗೆ ರಕ್ಷಣೆ ನೀಡುವುದನ್ನು ನಿರಾಕರಿಸಿದ್ದ ಸಿದ್ದರಾಮಯ್ಯ, ವೈಯುಕ್ತಿಕ ದ್ವೇಷದಿಂದ ಕೊಲೆ ನಡೆದಿದೆ ಎಂದು ಸಮರ್ಥಿಸಿಕೊಂಡಿದ್ದರು. ಕೋಮುಗಲಭೆಯಲ್ಲಿ ಹತ್ಯೆಯಾಗಿದ್ದಾನೆ ಎನ್ನಲಾದ ಹಿಂದೂ ಯುವಕ ಪರೇಶ್ ಮೇಸ್ತಾ ಆಕಸ್ಮಿಕವಾಗಿ ಸಾವಿಗೀಡಾಗಿದ್ದಾನೆ ಎಂಬುದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ಈ ತನಿಖಾ ವರದಿಯು ಚುನಾವಣಾ ಸಮಯದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…