BREAKING NEWS

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ : ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

ಶಾಸಕ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಿದ ಹಿಂದೂ ಕಾರ್ಯಕರ್ತರ ವಿರುದ್ಧ ಆಕ್ರೋಶ ಹೊರಹಾಕಿದರು. ಕಳೆದ ವಾರ ನಡೆದ ಸ್ಥಳೀಯ ಸಮಾರಂಭವೊಂದರಲ್ಲಿ ಮಾತನಾಡಿದ ಈ ಹೇಳಿಕೆಯ ಆಡಿಯೋ ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಹಿಂದೂ ಕಾರ್ಯಕರ್ತ ಸತ್ಯಜಿತ್ ಸುರತ್ಕಲ್ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದರು.

’24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಸಿದ್ದರಾಮಯ್ಯನವರಿಗೆ ನೀವು ಮತ ​​ಕೇಳಿದ್ದೀರಿ. ಭಜರಂಗದಳದ ಮೇಲೆ ನಿಷೇಧ ಹೇರಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಯಾಚಿಸಿದ್ದೀರಿ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ’ ಎಂದು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲು ಕಾಂಗ್ರೆಸ್ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ.

2013 ರಿಂದ 2018ರ ಅವಧಿಯಲ್ಲಿ ಸಿದ್ದರಾಮಯ್ಯನವರ ಆಳ್ವಿಕೆಯಲ್ಲಿ ಕರಾವಳಿ ಕರ್ನಾಟಕ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳು ನಡೆದಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸುವ ಮೂಲಕ ಆರೋಪಿಗಳನ್ನು ರಕ್ಷಿಸಿದೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ಇದನ್ನು 2018ರ ಚುನಾವಣಾ ವಿಷಯವಾಗಿಸಿತ್ತು ಮತ್ತು ಕರಾವಳಿ ಪ್ರದೇಶದಲ್ಲಿ ಚುನಾವಣೆಗಳನ್ನು ಗೆದ್ದಿತ್ತು.ಆಗ ಆರೋಪಿಗಳಿಗೆ ರಕ್ಷಣೆ ನೀಡುವುದನ್ನು ನಿರಾಕರಿಸಿದ್ದ ಸಿದ್ದರಾಮಯ್ಯ, ವೈಯುಕ್ತಿಕ ದ್ವೇಷದಿಂದ ಕೊಲೆ ನಡೆದಿದೆ ಎಂದು ಸಮರ್ಥಿಸಿಕೊಂಡಿದ್ದರು. ಕೋಮುಗಲಭೆಯಲ್ಲಿ ಹತ್ಯೆಯಾಗಿದ್ದಾನೆ ಎನ್ನಲಾದ ಹಿಂದೂ ಯುವಕ ಪರೇಶ್ ಮೇಸ್ತಾ ಆಕಸ್ಮಿಕವಾಗಿ ಸಾವಿಗೀಡಾಗಿದ್ದಾನೆ ಎಂಬುದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ಈ ತನಿಖಾ ವರದಿಯು ಚುನಾವಣಾ ಸಮಯದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

16 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

20 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

20 hours ago