ಬೆಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಸೋಮವಾರ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಸಿದ್ಧರಾಮಯ್ಯ ಅವರು ನಿನ್ನೆಯಷ್ಟೇ ಮಹಾರಾಷ್ಟ್ರದ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಳೆದ ಎರಡು ದಿನಗಳಿಂದಲೂ ಬೆಂಗಳೂರಿನಲ್ಲಿರುವ ಅಶೋಕ್ ಚೌವ್ಹಾಣ್ ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಇಂದು ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಚೌವ್ಹಾಣ್ ಕಾಂಗ್ರೆಸ್ ಪರವಾಗಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದರು.
ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ…
ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್ ಪಾರ್ಟಿ ಮೂಲಕ…
ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…