BREAKING NEWS

ದೇವೇಗೌಡರನ್ನು ಸಿದ್ದರಾಮಯ್ಯ ಹೆದರಿಸಿಟ್ಟುಕೊಂಡಿದ್ದರು: ಎಚ್‌ಡಿಕೆ

ಬೆಂಗಳೂರು: ಜೆಡಿಎಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪಾಳೇಗಾರಿಕೆ ಮಾಡುತ್ತಾ ದೇವೇಗೌಡರನ್ನು ಹೆದರಿಸಿಟ್ಟುಕೊಂಡಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸ್ಥಾನ ಗೆಲ್ಲಿಸಲಿ ಎಂದು ಜೆಡಿಎಸ್‌ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬ್ಯಾನರ್‌ನಲ್ಲಿ ತಮ್ಮ ಭಾವಚಿತ್ರ ಇಲ್ಲ ಎಂಬ ಕಾರಣಕ್ಕೆ ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಇಕ್ಬಾಲ್‌ ಅನ್ಸಾರಿ ಅವರನ್ನು ಮಂತ್ರಿ ಮಾಡಬೇಡಿ‌ ಅಂತ ಗಲಾಟೆ ಮಾಡಿದ್ದರು. ಸಭೆಯಿಂದ ಟವಲ್ ಕೊಡವಿಕೊಂಡು ಎದ್ದು ಹೋಗಿದ್ದರು. ಹೋಗುವಾಗ ಎಂಟು ಶಾಸಕರನ್ನು ಕರೆದುಕೊಂಡು ಹೋಗಿದ್ದರು. ಅವರಲ್ಲಿ ಎಷ್ಟು ಜನರನ್ನು ಗೆಲ್ಲಿಸಿಕೊಂಡರು? ಅವರಿಗೆ ಈ ಬಾರಿ ಜನರ ಮೂಲಕ ಉತ್ತರ ಕೊಡಿಸುತ್ತೇನೆ’ ಎಂದರು.

ಕಾಂಗ್ರೆಸ್‌–ಬಿಜೆಪಿ ಒಟ್ಟಾಗಿ ಜೆಡಿಎಸ್ ವಿರುದ್ಧ ಷಡ್ಯಂತ್ರ ರೂಪಿಸುತ್ತಿವೆ. ಒಳ ಒಪ್ಪಂದ ಮಾಡಿಕೊಂಡು ಪರಸ್ಪರ ಎ ಟೀಂ, ಬಿ ಟೀಂಗಳಂತೆ ಕೆಲಸ ಮಾಡುತ್ತಿವೆ. ಹೈದರಾಬಾದ್‌ನಲ್ಲಿ ಕಾಂಗ್ರೆಸ್‌ ನಾಯಕರ ಜತೆ ಜೆಡಿಎಸ್‌ ಮಾತುಕತೆ ಮಾಡಿದೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಬಿಜೆಪಿ ಜತೆ ಒಳ ಒಪ್ಪಂದವಾಗಿದೆ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಾರೆ. ಎರಡೂ ಪಕ್ಷಗಳಿಗೆ ಬೇರೆ ವಿಷಯ ಇಲ್ಲವೇ ಎಂದು ಪ್ರಶ್ನಿಸಿದರು.

‘ಗೌಡರ ಕುಟುಂಬವೇ ಅಂತಿಮ’

ಬೆಂಗಳೂರು: ‘ಜೆಡಿಎಸ್‌ ಪಕ್ಷದಲ್ಲಿ ಎಚ್‌.ಡಿ. ದೇವೇಗೌಡರ ಕುಟುಂಬವೇ ಅಂತಿಮ. ಅಲ್ಲಿ ಸ್ವತಂತ್ರ ಅಭಿಪ್ರಾಯಕ್ಕೆ ಅವಕಾಶವಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

‘ಆ ಪಕ್ಷದಲ್ಲಿ ದೇವೇಗೌಡರು, ಕುಮಾರಸ್ವಾಮಿ ಹೇಳಿದಂತೆ ಎಲ್ಲರೂ ಕೇಳಬೇಕು. ಸ್ವತಂತ್ರವಾಗಿ ಮಾತನಾಡಲು ಪ್ರಯತ್ನಿಸಿದರೆ ಪಕ್ಷದಿಂದ ಹೊರಹಾಕುತ್ತಾರೆ. ಅವರ ಕುಟುಂಬದ ವಿರುದ್ಧ ಮಾತನಾಡಿದರೆ ಪಕ್ಷದಲ್ಲಿ ಉಳಿಯಲು ಬಿಡುವುದಿಲ್ಲ. ಸ್ವತಂತ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ನನ್ನನ್ನು ಹೊರಹಾಕಿದಂತೆ ಈಗ ಗುಬ್ಬಿ ಮಾಜಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಅವರನ್ನೂ ಹೊರ ಕಳುಹಿಸಿದ್ದಾರೆ’ ಎಂದರು.

andolanait

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

49 mins ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

52 mins ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

53 mins ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

55 mins ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

1 hour ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

1 hour ago