ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಪ್ರಸಂಗ ನಡೆದಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಾರಿಯೂ ಸಹ ಶಾಸಕ ರಾಮಪ್ಪ ಅವರಿಗೆ ಟಿಕೆಟ್ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಇಂದು (ಮಾರ್ಚ್ 24) ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಈ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಾಸಕ ರಾಮಪ್ಪ ಮತ್ತೆ ಅದೇ ಕ್ಷೇತ್ರದಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದರಿಂದ ಅವರ ಬೆಂಬಲಿಗರು ಇಂದು ಬೆಂಗಳೂರಿನ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ತಮ್ಮ ನಾಯಕನಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ರಾಮಪ್ಪ ಬೆಂಬಲಿಗರನ್ನು ಸಮಾಧಾನಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ, ಟಿಕೆಟ್ ಆಮೇಲೆ ನೋಡೋಣ, ಸರ್ವೆ ರಿಪೋರ್ಟ್ ಬರಲಿ ಎಂದಿದ್ದಾರೆ.ಆದರೂ ಸುಮ್ಮನಾಗದ ಶಾಸಕ ರಾಮಪ್ಪ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ಜು ಸುತ್ತುವರೆದರು. ಈ ವೇಳೆ ತಳ್ಳಾಟ ಹಾಗೂ ನೂಕಾಟ ಉಂಟಾಗಿದೆ. ತಮ್ಮ ನಾಯಕನಿಗೇ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದರು. ಇದರಿಂದ ಭಾರೀ ತಳ್ಳಾಟ ಹಾಗೂ ನೂಕಾಟ ಉಂಟಾಗಿದ್ದು, ಈ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ಕಾರ್ಯಕರ್ತನೋರ್ವನ ಕಾಪಾಳಕ್ಕೆ ಹೊಡೆದಿದ್ದಾರೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…