ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಶಕ್ತಿ ಕೇಂದ್ರ ವಿಧಾನಸೌಧದ ಮೂರನೆ ಮಹಡಿಯ ಮುಖ್ಯಮಂತ್ರಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಹೆಸರನ್ನು ಅಳವಡಿಸಲಾಯಿತು.
ಸಿದ್ದರಾಮಯ್ಯ ತರುವಾಯ ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಇವರ ನಂತರ ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆ.ಹೆಚ್.ಮುನಿಯಪ್ಪ, ರಾಮಲಿಂಗ ರೆಡ್ಡಿ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಖಾನ್ ಕೂಡ ಪ್ರಮಾಣ ವಚನ ಸ್ವೀಕಾರ ಮಾಡಿದರು.





