ಮದ್ದೂರು: ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಶೋಭೆ ತರುವಂತದ್ದಲ್ಲ ಎಂದು ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಭಾನುವಾರ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಸಮಾಜದಲ್ಲಿ ಶೋಭೆ ತರುವುದಿಲ್ಲ. ಇದರಿಂದ ಸಮಾಜದಲ್ಲಿ ಪರಸ್ಪರ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಆಳುವ ಸರ್ಕಾರಗಳು ಕಾನೂನು ಮಾಡುವಾಗ ಅದು ಎಲ್ಲರಿಗೂ ಅನ್ವಯವಾಗುವಂತೆ ಇರಬೇಕು. ಕೇವಲ ಒಂದು ಸಮಾಜವನ್ನು ಗುರಿಯಾಗಿಟ್ಟುಕೊಂಡು ಕಾನೂನು ರೂಪಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.
ಆಯೋಧ್ಯೆ ನಿರ್ಮಾಣಕ್ಕೆ ಕಾರ್ಯ ಚಟುವಟಿಕೆ ನಿಲ್ಲಿಸಬೇಡಿ: ಅಯೋಧ್ಯೆಯ ರಾಮಮಂದಿರ ನಿರ್ಮಾಣದ ನಂತರ ನಮ್ಮ ಕಾರ್ಯ ಚಟುವಟಿಕೆ ಇಷ್ಟಕ್ಕೆ ಮುಗಿಯಬಾರದು. ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವುದು ನಮ್ಮ ಗುರಿಯಾಗಬೇಕು ಎನ್ನುವುದು ನಮ್ಮ ಅಪೇಕ್ಷೆಯಾಗಿದೆ. ಇದಕ್ಕೆ ಆರ್ಥಿಕವಾಗಿ ಸದೃಢರಾದವರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್ ಪಂದ್ಯಗಳು ಏಪ್ರಿಲ್ 15 ಹಾಗೂ ಏಪ್ರಿಲ್ 24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…