ಬೆಂಗಳೂರು : ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಎಂದಿದ್ದಾರೆ.
ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಕುಮಾರಸ್ವಾಮಿ ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.
ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ? ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…