BREAKING NEWS

100 ಕೋಟಿ ಪರಿಹಾರ ಕೋರಿ ಮಾಜಿ ಪತ್ನಿ, ಸಹೋದರನ ವಿರುದ್ಧ ಸಿದ್ಧಿಕಿ ಮಾನನಷ್ಟ ಕೇಸ್

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ 100 ಕೋಟಿ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಬ್ ಸಿದ್ಧಿಕಿ ಹಾಗೂ ಸಹೋದರ ಶಂಷುದ್ದೀನ್ ಸಿದ್ಧಿಕಿ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತನ್ನ ವಿರುದ್ಧ ಮಾಜಿ ಪತ್ನಿ ಆಲಿಯಾ ಮತ್ತು ಸಹೋದರ ಶಂಷುದ್ದೀನ್ ಮಾನಹಾನಿಕರ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ. ಮಾರ್ಚ್ 30ರಂದು ನ್ಯಾಯಮೂರ್ತಿ ರಿಯಾಜ್ ಚಂಗ್ಲಾ ಅವರ ಏಕಸದಸ್ಯ ಪೀಠದ ಎದುರು ಪ್ರಕರಣ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಮಾಜಿ ಪತ್ನಿ ಹಾಗೂ ಸಹೋದರ ನನ್ನ ಮಾನಹಾನಿಗೆ ಕಾರಣವಾಗುವ ಯಾವುದೇ ಹೇಳಿಕೆ ನೀಡದಂತೆ ಶಾಶ್ವತವಾಗಿ ತಡೆ ನೀಡುವಂತೆ ಅವರು ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಅವರಿಬ್ಬರಿಂದ ಲಿಖಿತ ಕ್ಷಮಾಪಣಾ ಪತ್ರಕ್ಕೂ ಸಿದ್ಧಿಕಿ ಬೇಡಿಕೆ ಇಟ್ಟಿದ್ದಾರೆ.

2008ರಲ್ಲಿ ಸಹೋದರ ಶಂಷುದ್ದೀನ್‌ನನ್ನು ತನ್ನ ಮ್ಯಾನೇಜರ್ ಆಗಿ ನೇಮಕ ಮಾಡಿಕೊಂಡು ಎಲ್ಲ ಹಣಕಾಸು ವ್ಯವಹಾರಗಳನ್ನು ಒಪ್ಪಿಸಿದ್ದೆ. ಆದರೆ, ಆತ ನನ್ನನ್ನು ವಂಚಿಸಿ ನನ್ನ ಹಣದಲ್ಲಿ ಆಸ್ತಿ ಖರೀದಿ ಮಾಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ, ನನ್ನ ಮಾಜಿ ಪತ್ನಿಯನ್ನು ಉತ್ತೇಜಿಸಿ ಸುಳ್ಳು ಪ್ರಕರಣ ದಾಖಲಿಸುವಂತೆ ಮಾಡಿದ್ದಾನೆ ಎಂದು ಸಿದ್ಧಿಕಿ ದಾಖಲಿಸಿರುವ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಆಲಿಯಾ ಮತ್ತು ಶಂಷುದ್ದೀನ್ ತನಗೆ ₹21 ಕೋಟಿ ವಂಚಿಸಿ ಆಸ್ತಿ ಖರೀದಿಸಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ.

ಅಕ್ರಮ ಆಸ್ತಿಯನ್ನು ತನಗೆ ಹಿಂದಿರುಗಿಸುವಂತೆ ಕೇಳಿದಾಗ, ಇಬ್ಬರೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ. ನನ್ನ ವಿರುದ್ಧ ಕೀಳುಮಟ್ಟದ ವಿಡಿಯೊ ಮತ್ತು ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ಮಾನ ಕಳೆದಿದ್ದಾರೆ ಎಂದೂ ಸಿದ್ಧಿಕಿ ದೂರಿದ್ದಾರೆ.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

11 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

11 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

11 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

11 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

11 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

12 hours ago