ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ 100 ಕೋಟಿ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಬ್ ಸಿದ್ಧಿಕಿ ಹಾಗೂ ಸಹೋದರ ಶಂಷುದ್ದೀನ್ ಸಿದ್ಧಿಕಿ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ತನ್ನ ವಿರುದ್ಧ ಮಾಜಿ ಪತ್ನಿ ಆಲಿಯಾ ಮತ್ತು ಸಹೋದರ ಶಂಷುದ್ದೀನ್ ಮಾನಹಾನಿಕರ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ. ಮಾರ್ಚ್ 30ರಂದು ನ್ಯಾಯಮೂರ್ತಿ ರಿಯಾಜ್ ಚಂಗ್ಲಾ ಅವರ ಏಕಸದಸ್ಯ ಪೀಠದ ಎದುರು ಪ್ರಕರಣ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಮಾಜಿ ಪತ್ನಿ ಹಾಗೂ ಸಹೋದರ ನನ್ನ ಮಾನಹಾನಿಗೆ ಕಾರಣವಾಗುವ ಯಾವುದೇ ಹೇಳಿಕೆ ನೀಡದಂತೆ ಶಾಶ್ವತವಾಗಿ ತಡೆ ನೀಡುವಂತೆ ಅವರು ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಅವರಿಬ್ಬರಿಂದ ಲಿಖಿತ ಕ್ಷಮಾಪಣಾ ಪತ್ರಕ್ಕೂ ಸಿದ್ಧಿಕಿ ಬೇಡಿಕೆ ಇಟ್ಟಿದ್ದಾರೆ.
2008ರಲ್ಲಿ ಸಹೋದರ ಶಂಷುದ್ದೀನ್‌ನನ್ನು ತನ್ನ ಮ್ಯಾನೇಜರ್ ಆಗಿ ನೇಮಕ ಮಾಡಿಕೊಂಡು ಎಲ್ಲ ಹಣಕಾಸು ವ್ಯವಹಾರಗಳನ್ನು ಒಪ್ಪಿಸಿದ್ದೆ. ಆದರೆ, ಆತ ನನ್ನನ್ನು ವಂಚಿಸಿ ನನ್ನ ಹಣದಲ್ಲಿ ಆಸ್ತಿ ಖರೀದಿ ಮಾಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ, ನನ್ನ ಮಾಜಿ ಪತ್ನಿಯನ್ನು ಉತ್ತೇಜಿಸಿ ಸುಳ್ಳು ಪ್ರಕರಣ ದಾಖಲಿಸುವಂತೆ ಮಾಡಿದ್ದಾನೆ ಎಂದು ಸಿದ್ಧಿಕಿ ದಾಖಲಿಸಿರುವ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.
ಆಲಿಯಾ ಮತ್ತು ಶಂಷುದ್ದೀನ್ ತನಗೆ ₹21 ಕೋಟಿ ವಂಚಿಸಿ ಆಸ್ತಿ ಖರೀದಿಸಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ.
ಅಕ್ರಮ ಆಸ್ತಿಯನ್ನು ತನಗೆ ಹಿಂದಿರುಗಿಸುವಂತೆ ಕೇಳಿದಾಗ, ಇಬ್ಬರೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ. ನನ್ನ ವಿರುದ್ಧ ಕೀಳುಮಟ್ಟದ ವಿಡಿಯೊ ಮತ್ತು ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ಮಾನ ಕಳೆದಿದ್ದಾರೆ ಎಂದೂ ಸಿದ್ಧಿಕಿ ದೂರಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…