ಬೆಂಗಳೂರು: ಉದ್ಯಮಿ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಮನೆಯಲ್ಲಿ 2,000ಕ್ಕೂ ಹೆಚ್ಚು ಡಿಮಾಂಡ್ ಡ್ರಾಫ್ಟ್ (ಡಿ.ಡಿ) ಹಾಗೂ 5,000 ರೇಷ್ಮೆ ಸೀರೆಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಉಮ್ರಾ ಫೌಂಡೇಷನ್ ಹೆಸರಿನಲ್ಲಿ ತಲಾ ₹1,105 ಮೌಲ್ಯದ ಡಿ.ಡಿಗಳನ್ನು ಮನೆಯಲ್ಲಿ ಇರಿಸಲಾಗಿತ್ತು. ತಲಾ ₹5,000 ಮೌಲ್ಯದ 5,000 ಕಂಚಿ ರೇಷ್ಮೆ ಸೀರೆಗಳೂ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಡಿ.ಡಿ, ಸೀರೆ ಮತ್ತು ಕೆಜಿಎಫ್ ಬಾಬು ಅವರ ಭಾವಚಿತ್ರವುಳ್ಳ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಒಂದೇ ಕಡೆ ಇರಿಸಲಾಗಿತ್ತು. ಡಿ.ಡಿಗಳಲ್ಲಿ ಚಿಕ್ಕಪೇಟೆ ನಿವಾಸಿಗಳ ಹೆಸರಿದೆ ಎಂಬ ಮಾಹಿತಿ ಲಭ್ಯವಾಗಿದೆ.