BREAKING NEWS

ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು: ಸಿಎಂ ಸಿದ್ದರಾಮಯ್ಯ ಕರೆ

ಚಾಮರಾಜನಗರ : ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬಿಟ್ಟು ಸಾಲ ಮಾಡಿ ವ್ಯವಸಾಯ ಮಾಡಿ ಜೀವನ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೆ ಮಹದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಇಲ್ಲಿ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರಪತಿ ಭವನ ಹೆಸರು ಇನ್ನು ತಪೋಭವನ:  ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು.ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮೌಢ್ಯ ತೊಡೆದಿದ್ದೇನೆ: ಚಾಮರಾಜನಗರ ಜಿಲ್ಲೆಗೆ ಅಂಟಿದ್ದ ಮೌಡ್ಯ ತೊಡೆದು ಹಾಕಿರುವೆ, ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ 12 ಬಾರಿ ಭೇಟಿ ನೀಡಿ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದ್ದೆ. ಈಗ ಮತ್ತೆ ಬಂದಿದ್ದೇನೆ ಎಂದರು.

ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಅವರು ಇಂದು ಬುಧವಾರ ಬೆಳಗ್ಗೆ ಮಲೆ ಮಹದೇಶ್ವರನ ದರ್ಶನ ಪಡೆದರು. ಈ ವೇಳೆ ರಾಜ್ಯದ ಸಂಕಷ್ಟದ ಪರಿಸ್ಥಿತಿ ನಿವಾರಣೆ ಆಗಲಿ, ಉತ್ತಮ ಮಳೆ ಆಗಲಿ, ರೈತರಿಗೆ ಒಳ್ಳೆಯದಾಗಲಿ ಎಂದು ಮಹದೇಶ್ವರನನ್ನು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

2 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

2 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

2 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

2 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

2 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

2 hours ago