BREAKING NEWS

ದೆಹಲಿ ಶಾಲೆಗಳ ಆಧುನೀಕರಣಕ್ಕೆ ಸಿಸೋಡಿಯಾ ಕಾರಣ: ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶಾಲೆಗಳ ಆಧುನೀಕರಣಕ್ಕೆ ಮನೀಶ್ ಸಿಸೋಡಿಯಾ ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.

ಪ್ರತಿ ದಿನ ಮುಂಜಾನೆ ಆರು ಗಂಟೆಗೆ ಎದ್ದು ತಪಾಸಣೆಗೆ ತೆರಳುವ ಸಿಸೋಡಿಯಾ ಅವರಿಂದಲೇ ಕಳೆದ ಎಂಟು ವರ್ಷಗಳಲ್ಲಿ ದೆಹಲಿ ಸರ್ಕಾರಿ ಶಾಲೆಗಳು ಬದಲಾವಣೆಯಾಗಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಪೂರ್ವ ವಿನೋದ್ ನಗರದಲ್ಲಿ ರಾಜ್‌ಕೀಯ ಸರ್ವೋದಯ ಕನ್ಯಾ ಬಾಲ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದ ಅವರು, ಶಾಲೆ ಸಂಪೂರ್ಣ ನಿರ್ಮಾಣವಾದ ಬಳಿಕ ಕೊಲಂಬಿಯಾ ವಿಶ್ವವಿದ್ಯಾಲಯದಂತೆ ಕಾಣಲಿದೆ ಎಂದು ಹೇಳಿದರು.

ಭ್ರಷ್ಟಾಚಾರದ ಆರೋಪದಲ್ಲಿ ಕೇಂದ್ರವು ಸಿಸೋಡಿಯಾ ಅವರನ್ನು ಜೈಲಿಗೆ ಅಟ್ಟಿದೆ. ಆದರೆ ಪ್ರತಿ ದಿನ ಬೆಳಗ್ಗೆ ಎದ್ದು ಶಾಲೆಗಳಿಗೆ ಭೇಟಿ ನೀಡುತ್ತಿದ್ದ ನಾಯಕರು ಅವರಾಗಿದ್ದಾರೆ. ಭ್ರಷ್ಟ ನಾಯಕರಾಗಿದ್ದರೆ ಹಾಗೇ ಮಾಡುತ್ತಿರಲಿಲ್ಲ ಎಂದು ಹೇಳಿದರು.

ದೆಹಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ವೈದ್ಯರು, ಎಂಜಿನಿಯರ್ ಮತ್ತು ಪೊಲೀಸ್ ಅಧಿಕಾರಿಗಳಂತಹ ಉನ್ನತ ಪದವಿ ಹೊಂದುತ್ತಿದ್ದಾರೆ. ಈ ಶಿಕ್ಷಣ ಬದಲಾವಣೆಯ ಹಿಂದೆ ಓರ್ವ ವ್ಯಕ್ತಿ ಇದ್ದು, ಅವರೇ ಮನೀಶ್ ಸಿಸೋಡಿಯಾ ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

6 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

10 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

19 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago