BREAKING NEWS

ಪೆನ್‌ಡ್ರೈವ್‌ ಪ್ರಕರಣ: ಮಹಿಳಾ ಪೊಲೀಸರಿಂದಲೇ ರೇವಣ್ಣನನ್ನು ವಶಕ್ಕೆ ಪಡೆದ ಎಸ್‌ಐಟಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ ಭೀತಿಯಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನನ್ನು 35 ದಿನಗಳ ಬಳಿಕ ಕೊನೆಗೂ ಎಸ್‌ಐಟಿ ಅಧಿಕಾರಿಗಳು ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಡ ರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಚುನಾವಣೆ ನಡೆದ ನಂತರ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿದ್ದರು. ನಿನ್ನೆ(ಮೇ.31) ತಡರಾತ್ರಿ 12.50ರ ಸಮಯದಲ್ಲಿ ರಾಜ್ಯಕ್ಕೆ ಆಗಮಿಸಿದ ಪ್ರಜ್ವಲ್‌ರನ್ನು ಅಲ್ಲೇ ಮೊಕ್ಕಾಂ ಹೂಡಿದ್ದ ಎಸ್‌ಐಟಿ ಅಧಿಕಾರಿಗಳು ಕೇಂದ್ರ ಕೈಗಾರಿಗಾ ಭದ್ರತಾ ಸಿಬ್ಬಂದಿ ಹಾಗೂ ವಲಸೆ ಅಧಿಕಾರಿಗಳ ಸಹಾಯದಿಂದ ನಿಲ್ದಾಣದಲ್ಲಿಯೇ ಬಂಧಿಸಿದ್ದಾರೆ.

ಜರ್ಮನಿಯ ಮ್ಯೂನಿಕ್‌ನಿಂದ ಉಫ್ತಾನಾ ಏರ್‌ಲೈನ್ಸ್‌ ಎಲ್‌ಎಚ್‌-764 ನಿಂದ ಹೊರಟ ಅವರು ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್‌-2ಕ್ಕೆ ಬಂದಿಳಿದರು.

ಬಳಿಕ ಬಂದ ಪ್ರಜ್ವಲ್‌ರನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು ವಿಶೇಷ ಕೊಠಡಿಗೆ ಕರೆದೊಯ್ದು ಪರಿಶೀಲನೆ ನಡೆಸಿದರು. ನಂತರ ಪ್ರಜ್ವಲ್‌ ಅವರ ಬೆರಳಚ್ಚು, ಫೋಟೋ ಕ್ಲಿಕ್ಕಿಸಿಕೊಂಡು ದಾಖಲಿಸಿಕೊಂಡರು.

ನಿಲ್ದಾಣದಿಂದ ಪ್ರಜ್ವಲ್‌ರನ್ನು ಎಸ್‌ಐಟಿ ಅಧಿಕಾರಿಗಳು ವಿಶೇಷ ವಾಹನದ ಮೂಲಕ ಬಳ್ಳಾರಿ ರಸ್ತೆಯಿಂದ ಅರಮನೆ ರಸ್ತೆ ಬಳಿಯಿರುವ ಎಸ್‌ಐಟಿ ಕಚೇರಿಗೆ ಕರೆದೊಯ್ದರು. ಮುಂಜಾಗೃತ ಕ್ರಮವಾಗಿ ಎಸ್‌ಐಟಿ ಕಚೇರಿ ಹಾಗೂ ರಸ್ತೆ ಸುತ್ತಲೂ ಬಿಗಿ ಭದ್ರತಾ ಕ್ರಮ ಕೈಗೊಂಡಿದ್ದರು..

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

1 hour ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

8 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

8 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

8 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

8 hours ago