BREAKING NEWS

ಶಿವಾನಂದ ಪಾಟೀಲ್ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕು : ಬಿ.ಸಿ ಪಾಟೀಲ್

ಹಾವೇರಿ : ಹಿರೇಕೆರೂರು ರೈತರ ಕಡೆಯಿಂದ ಶಿವಾನಂದ ಪಾಟೀಲ್‍ಗೆ ಒಂದು ಕೋಟಿ ರೂ. ಕೊಡುತ್ತೇವೆ ಆತ್ಮಹತ್ಯೆ ಮಾಡಿಕೊಳ್ತಾರಾ? ಕೇಳಿ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ.

ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ವೇಳೆ ರೈತರ ಆತ್ಮಹತ್ಯೆಯ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಹಗುರವಾಗಿ ಮಾತನಾಡಿದ್ದಾರೆ. ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಹಾವೇರಿ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಕಿತ್ತು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ರೈತ ಸಮುದಾಯವನ್ನು ಕಡೆಗಣಿಸಿದೆ. ಸಾಲು ಸಾಲು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ 18 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಹಾವೇರಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿಲ್ಲ. ಕಳೆದ ಬಾರಿ ನಾವು ಈ ವೇಳೆಗಾಗಲೇ ರೈತರಿಗೆ ಸೌಲಭ್ಯಗಳನ್ನು ಕೊಟ್ಟಿದ್ದೆವು. ಅಡುಗೆ ಮಾಡಿಟ್ಟಿದ್ದೇವೆ ಆದರೆ ಅದನ್ನು ಜನರಿಗೆ ಬಡಿಸಲು ಆಗದಂತಹ ಸರ್ಕಾರ ಇದಾಗಿದೆ ಎಂದು ಕುಟುಕಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ನೀರಾವರಿ ಯೋಜನೆಗಳನ್ನು ಕೂಡಾ ಜನರಿಗೆ ಈ ಸರ್ಕಾರ ತಲುಪಿಸುತ್ತಿಲ್ಲ. ವಿದ್ಯುತ್‍ಗೂ ಹೆಚ್ಚಿನ ದರ ವಿಧಿಸುತ್ತಿದ್ದಾರೆ. ಯಾವುದೇ ದರವನ್ನೂ ಸರ್ಕಾರ ಕಡಿಮೆ ಮಾಡುತ್ತಿಲ್ಲ. ಹಿರೇಕೆರೂರು ತಾಲೂಕಿನಲ್ಲಿ ಅಕ್ರಮವಾಗಿ ಎಂಆರ್‍ಪಿಗಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಯಾವ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಎಂದು ದೂರಿದ್ದಾರೆ. ಈ ವೇಳೆ ಬಾರುಕೋಲನ್ನು ಬೀಸುವ ಮೂಲಕ ವಿನೂತನವಾಗಿ ಸರ್ಕಾರಕ್ಕೆ ಚಾಟಿ ಏಟು ಕೊಡುತ್ತಿದ್ದೇನೆ ಎಂದಿದ್ದಾರೆ.

ಆಪರೇಷನ್ ಹಸ್ತದ ವಿಚಾರವಾಗಿ, ಕಾಂಗ್ರೆಸ್‍ಗೆ ಹೋಗುವವರಿಗೆ ಲೋಕಸಭೆ ಚುನಾವಣೆ ಬಳಿಕ ಬಹಳ ಕಷ್ಟವಾಗಲಿದೆ. ಈಗಾಗಲೇ ಗೃಹ ಸಚಿವ ಜಿ.ಪರಮೇಶ್ವರ್ ಬಂದವರು ಲಾಸ್ಟ್ ಬೆಂಚ್‍ನಲ್ಲಿ ಕೂರಬೇಕು ಎಂದಿದ್ದಾರೆ. ಇದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

lokesh

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago