Mysore
27
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

ಬಿಹಾರದಲ್ಲಿ ಕಳ್ಳಬಟ್ಟಿ ದುರಂತ: 20 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

ಪಟ್ನಾ: ಬಿಹಾರದ ಮೋತಿಹಾರಿಯಲ್ಲಿ ಕಳ್ಳಬಟ್ಟಿ ಕುಡಿದು 20 ಮಂದಿ ಮೃತಪಟ್ಟಿದ್ದಾರೆ.

ಮೋತಿಹಾರಿ ಪ್ರದೇಶದ ಲಕ್ಷ್ಮೀಪುರ, ಪಹರ್‌ಪುರ ಮತ್ತು ಹರ್ಸಿದ್ಧಿ ಬ್ಲಾಕ್‌ನಲ್ಲಿ ಹಲವು ಮಂದಿ ಕಳ್ಳಬಟ್ಟಿ ಕುಡಿದಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ನಕಲಿ ಮದ್ಯ ಸಾಗಿಸುತ್ತಿದ್ದ ಟ್ಯಾಂಕ್ ಅನ್ನು ಮೋತಿಹಾರಿಗೆ ತಂದು ಸ್ಥಳೀಯ ವ್ಯಾಪಾರಿಗಳಿಗೆ ವಿತರಿಸಿದ್ದು ದುರಂತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

‘2016ರಿಂದ ಬಿಹಾರದಲ್ಲಿ ಮದ್ಯ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೆ, ಕಾನೂನು ಜಾರಿಯಲ್ಲಿ ಲೋಪದೋಷಗಳಿವೆ’ ಎಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗವು ಬಿಹಾರ ಸರ್ಕಾರಕ್ಕೆ ಹಾಗೂ ಪೊಲೀಸ್‌ ಮಹಾನಿರ್ದೇಶಕರಿಗೆ ನೋಟಿಸ್‌ ಜಾರಿ ಮಾಡಿತ್ತು.

2022ರ ಡಿಸೆಂಬರ್‌ನಲ್ಲಿ ಬಿಹಾರದ ಸಾರಣ್‌ ಜಿಲ್ಲೆಯ ಛಪರಾದಲ್ಲಿ ಕಳ್ಳಬಟ್ಟಿ ಕುಡಿದು 70ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!