ಪಟ್ನಾ: ಬಿಹಾರದ ಮೋತಿಹಾರಿಯಲ್ಲಿ ಕಳ್ಳಬಟ್ಟಿ ಕುಡಿದು 20 ಮಂದಿ ಮೃತಪಟ್ಟಿದ್ದಾರೆ.
ಮೋತಿಹಾರಿ ಪ್ರದೇಶದ ಲಕ್ಷ್ಮೀಪುರ, ಪಹರ್‌ಪುರ ಮತ್ತು ಹರ್ಸಿದ್ಧಿ ಬ್ಲಾಕ್‌ನಲ್ಲಿ ಹಲವು ಮಂದಿ ಕಳ್ಳಬಟ್ಟಿ ಕುಡಿದಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ನಕಲಿ ಮದ್ಯ ಸಾಗಿಸುತ್ತಿದ್ದ ಟ್ಯಾಂಕ್ ಅನ್ನು ಮೋತಿಹಾರಿಗೆ ತಂದು ಸ್ಥಳೀಯ ವ್ಯಾಪಾರಿಗಳಿಗೆ ವಿತರಿಸಿದ್ದು ದುರಂತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
‘2016ರಿಂದ ಬಿಹಾರದಲ್ಲಿ ಮದ್ಯ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೆ, ಕಾನೂನು ಜಾರಿಯಲ್ಲಿ ಲೋಪದೋಷಗಳಿವೆ’ ಎಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗವು ಬಿಹಾರ ಸರ್ಕಾರಕ್ಕೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತ್ತು.
2022ರ ಡಿಸೆಂಬರ್‌ನಲ್ಲಿ ಬಿಹಾರದ ಸಾರಣ್ ಜಿಲ್ಲೆಯ ಛಪರಾದಲ್ಲಿ ಕಳ್ಳಬಟ್ಟಿ ಕುಡಿದು 70ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿತ್ತು.
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ…
ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.…
ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ…