ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ ಮೃತಪಟ್ಟ ಹಿನ್ನೆಲೆ ಪರಿಶೀಲನೆಗೆ ಮನೆಗೆ ತೆರಳಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಸ್ನೇಕ್ ನರೇಶ್ ಮನೆಯಲ್ಲಿ ನೂರಾರು ನಾಗರಹಾವುಗಳು ಪತ್ತೆಯಾಗಿವೆ. ನಾಗರಹಾವು ಸೇರಿದಂತೆ ನೂರಾರು ಹಾವಿನ ಮರಿಗಳು ಸಿಕ್ಕಿವೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳ ರಕ್ಷಣೆ ಮಾಡಿದ್ದಾರೆ. ಮನೆ ಸೇರಿದಂತೆ ಕಾರು, ಸ್ಕೂಟಿಗಳಲ್ಲೂ ನಾಗರಹಾವುಗಳು ಪತ್ತೆಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ನಾಗರಹಾವುಗಳನ್ನ ರಕ್ಷಿಸಿ ಮನೆಯಿಂದ ಕೊಂಡೊಯ್ದಿದ್ದಾರೆ.
ಸೆರೆ ಹಿಡಿದ ನಾಗರಹಾವು ಕಚ್ಚಿ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ನೂರಾರು ನಾಗರಹಾವುಗಳು ಮನೆಯಲ್ಲಿ ಪತ್ತೆ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಈ ಹಿಂದೆ ಕೊಳಕುಮಂಡಲ ಹಾವು ಕಚ್ಚಿದ್ದ ಕಾರಣ ಬೆರಳನ್ನೇ ಕತ್ತರಿಸಿಕೊಂಡಿದ್ದ ಸ್ನೇಕ್ ನರೇಶ್, ಟೈಲರ್ ವೃತ್ತಿ ಬಿಟ್ಟು ಹಾವು ಹಿಡಿಯುವುದನ್ನೇ ಕಾಯಕ ಮಾಡಿಕೊಂಡಿದ್ದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…