ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್ ಜಾಮೀನು ಮಂಜೂರು ಮಾಡಿದೆ.
ಆಕೆಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಜಾಮೀನು ಅವಧಿಯಲ್ಲಿ ಸೆಟಲ್ವಾಡ್ ಅವರ ಪಾಸ್‌ಪೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್‌ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.
ಒಂದು ವೇಳೆ ಆಕೆ ಈ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ, ಗುಜರಾತ್ ಪೊಲೀಸರಿಗೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವ ಮೂಲಕ ಜಾಮೀನು ರದ್ದುಗೊಳಿಸಲು ಕೋರ್ಟ್ ಅನುಮತಿ ನೀಡಿದೆ.
ಕಳೆದ ವರ್ಷ ಸೆಪ್ಟೆಂಬರ್ 2 ರಂದು, ಸುಪ್ರೀಂ ಕೋರ್ಟ್ ಆಕೆಗೆ ಮಧ್ಯಂತರ ಜಾಮೀನು ನೀಡಿದ್ದು, ಆಕೆ ಮಹಿಳೆ ಮತ್ತು ಹೆಚ್ಚಿನ ಸಾಕ್ಷ್ಯಾಧಾರಗಳು 2002 ರ ಪ್ರಕರಣಕ್ಕೆ ಸಂಬಂಧಿಸಿವೆ. ಈ ಷರತ್ತುಗಳು ಇಂದಿಗೂ ಪ್ರಸ್ತುತವಾಗಿರುವ ಕಾರಣ ಅವರಿಗೆ ಜಾಮೀನು ನೀಡಲು ನಿರ್ಧರಿಸಿದೆ.
(ಮಾಹಿತಿ ನಿರೀಕ್ಷಿಸಲಾಗಿದೆ)