BREAKING NEWS

ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

ನವದೆಹಲಿ:  2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್‌ ಜಾಮೀನು ಮಂಜೂರು ಮಾಡಿದೆ.

ಆಕೆಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಜಾಮೀನು ಅವಧಿಯಲ್ಲಿ ಸೆಟಲ್ವಾಡ್ ಅವರ ಪಾಸ್‌ಪೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್‌ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.

ಒಂದು ವೇಳೆ ಆಕೆ ಈ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ, ಗುಜರಾತ್ ಪೊಲೀಸರಿಗೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವ ಮೂಲಕ ಜಾಮೀನು ರದ್ದುಗೊಳಿಸಲು ಕೋರ್ಟ್ ಅನುಮತಿ ನೀಡಿದೆ.

ಕಳೆದ ವರ್ಷ ಸೆಪ್ಟೆಂಬರ್ 2 ರಂದು, ಸುಪ್ರೀಂ ಕೋರ್ಟ್ ಆಕೆಗೆ ಮಧ್ಯಂತರ ಜಾಮೀನು ನೀಡಿದ್ದು, ಆಕೆ ಮಹಿಳೆ ಮತ್ತು ಹೆಚ್ಚಿನ ಸಾಕ್ಷ್ಯಾಧಾರಗಳು 2002 ರ ಪ್ರಕರಣಕ್ಕೆ ಸಂಬಂಧಿಸಿವೆ. ಈ ಷರತ್ತುಗಳು ಇಂದಿಗೂ ಪ್ರಸ್ತುತವಾಗಿರುವ ಕಾರಣ ಅವರಿಗೆ ಜಾಮೀನು ನೀಡಲು ನಿರ್ಧರಿಸಿದೆ.

(ಮಾಹಿತಿ ನಿರೀಕ್ಷಿಸಲಾಗಿದೆ)

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago