ನವದೆಹಲಿ : ಸಂವಿಧಾನದ ವಿರುದ್ಧ ನಡೆಯುತ್ತಿರುವ ದಾಳಿಯ ವಿರುದ್ಧ ಕಳವಳ ವ್ಯಕ್ತಪಡಿಸಿರುವ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ” ನೂತನ ಸಂಸತ್ ಭವನದ ಕಾರ್ಯಕಲಾಪಗಳ ಆರಂಭದ ದಿನದಂದು ರಾಜಕಾರಣಿಗಳಿಗೆ ವಿತರಿಸಲಾಗಿರುವ ನೂತನ ಸಂವಿಧಾನ ಪ್ರತಿಗಳಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಪದಗಳು ಕಣ್ಮರೆಯಾಗಿವೆ ಎಂದು ಆರೋಪಿಸಿದ್ದಾರೆ ಎಂದು ndtv.com ವರದಿ ಮಾಡಿದೆ.
ಸೆ. 19ರಂದು ನಮಗೆ ನೀಡಲಾದ ನೂತನ ಸಂವಿಧಾನ ಪ್ರತಿಗಳ ಸಂವಿಧಾನ ಪೀಠಿಕೆಯಲ್ಲಿ ‘ಸಮಾಜವಾದಿ, ಜಾತ್ಯತೀತ’ ಪದಗಳು ಇರಲಿಲ್ಲ ಎಂದು ಅವರು ಮಂಗಳವಾರ ANI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
“1976ರಲ್ಲಿ ಆ ಪದಗಳನ್ನು ತಿದ್ದುಪಡಿಯ ನಂತರ ಸಂವಿಧಾನ ಪೀಠಿಕೆಗೆ ಸೇರ್ಪಡೆ ಮಾಡಲಾಯಿತು ಎಂಬ ಸಂಗತಿ ನಮಗೆ ತಿಳಿದಿದೆ. ಆದರೆ, ಈಗ ಆ ಪದಗಳಿಲ್ಲದ ಸಂವಿಧಾನ ಪ್ರತಿಯನ್ನು ನೀಡಿದರೆ ಅದು ಕಳವಳಕಾರಿ ಸಂಗತಿಯಾಗಿದೆ” ಎಂದೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
“ಅವರ ಉದ್ದೇಶಗಳು ಸಂಶಯಾಸ್ಪದವಾಗಿವೆ. ಇದನ್ನು ತುಂಬಾ ಜಾಣ್ಮೆಯಿಂದ ಮಾಡಲಾಗಿದೆ. ಇದು ನನ್ನ ಪಾಲಿಗೆ ಕಳವಳಕಾರಿ ಸಂಗತಿಯಾಗಿದೆ” ಎಂದು ಅವರು ಆರೋಪಿಸಿದ್ದಾರೆ.
“ನಾನು ಈ ವಿಷಯವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆನಾದರೂ, ಅದಕ್ಕೆ ನನಗೆ ಅವಕಾಶ ದೊರೆಯಲಿಲ್ಲ” ಎಂದೂ ಅವರು ಹೇಳಿದ್ದಾರೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…