ದಿಲ್ಲಿಯಲ್ಲಿ ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಹೇಳುತ್ತಿದ್ದಾರೆ: ರಾಹುಲ್‌ಗೆ ಮೋದಿ ತಿರುಗೇಟು

ಹೊಸದಿಲ್ಲಿ: ಭಾರತದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿಲ್ಲ ಎನ್ನುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.

ದಿಲ್ಲಿಯಲ್ಲಿ ನನಗೆ ಕೆಲವರು ಪ್ರಜಾಪ್ರಭುತ್ವದ ಪಾಠ ಹೇಳುತ್ತಿದ್ದಾರೆ. ಆಗಾಗ್ಗೆ ಅವರು ನನ್ನ ಕಾಲೆಳೆಯಲು ಯತ್ನಿಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ನನ್ನ ಕಾಲೆಳೆಯುವವರಿಗೆ ನಾನು ಜಮ್ಮು ಕಾಶ್ಮೀರದ ಜಿಲ್ಲಾಭಿವೃದ್ಧಿ ಸಮಿತಿ ಚುನಾವಣೆಯ ಫಲಿತಾಂಶ ತೋರಿಸುತ್ತೇನೆ. ಚುನಾವಣೆಯು ಪ್ರಜಾಪ್ರಭುತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಕೇಂದ್ರಾಡಳಿತ ಪ್ರದೇಶಗಳಿಗೆ ಆಯುಷ್ಮಾನ್‌ ಭಾರತ ಯೋಜನೆ ಬಿಡುಗಡೆ ಕಾರ್ಯಕ್ರಮದಲ್ಲಿ ತಿಳಿಸಿದರು.

ಇತ್ತೀಚೆಗೆ ಮೋದಿ ವಿರುದ್ಧ ಮಾತನಾಡಿದ್ದ ರಾಹುಲ್‌ ಗಾಂಧಿ ಅವರು ಭಾರತದಲ್ಲಿ ಪ್ರಜಾಪ್ರಭುತ್ವ ಎಂಬುದು ಇಲ್ಲ. ಮೋದಿ ವಿರುದ್ಧ ತಿರುಗಿಬಿದ್ದವರನ್ನು ಭಯೋತ್ಪಾದಕರಂತೆ ಬಿಂಬಿಸಲಾಗುತ್ತಿದೆ ಎಂದು ಕಿಡಿಕಾರಿದ್ದರು.

 

× Chat with us