ಸೌರವ್‌ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಪಶ್ಚಿಮ ಬಂಗಾಳ: ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದು, ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಎದೆ ನೋವು ಕಾಣಿಸಿಕೊಂಡಿದ್ದರಿಂದ ಗಂಗೂಲಿಗೆ ಕೆಲವು ದಿನಗಳ ಹಿಂದೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಚೇತರಿಸಿಕೊಂಡ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮತ್ತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಜನವರಿ 27ರಂದು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಆಸ್ಪತ್ರೆಯ ವೈದ್ಯರು ಗಂಗೂಲಿಗೆ 2ನೇ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಿ ಮತ್ತೆರಡು ಸ್ಟೆಂಟ್ ಅಳವಡಿಸಿದ್ದಾರೆ.

× Chat with us