BREAKING NEWS

ಮೈಸೂರು: ಗಡಿ ಚೆಕ್‌ಪೋಸ್ಟ್‌ಗಳಿಗೆ ಎಸ್ಪಿ ಸೀಮಾ ಲಾಟ್ಕರ್‌ ಭೇಟಿ!

ಮೈಸೂರು: ಲೋಕಸಭಾ ಚುನಾವಣೆ 2024 ರ ಅಂಗವಾಗಿ ತೆರೆದಿರುವ ಕಡಕೋಳ ಮತ್ತು ತಾಂಡವಪುರ ಚೆಕ್ ಪೋಸ್ಟ್ ಗಳಿಗೆ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್ ಐಪಿಎಸ್ ರವರು ಇಂದು ಭೇಟಿ ನೀಡಿ ಪರಿಶೀಲಿಸಿದರು.

ಗಡಿ ಭಾಗಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಅಕ್ರಮ ಹಣ ಸಾಗಾಟ ಸೇರಿದಂತೆ ಹಲವು ವಿಚಾರಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈ ಹಿನ್ನಲ್ಲೆ ಇಂದು (ಮಾ.೨೨) ಮುಂಜಾನೆಯಿಂದಲೇ ಚೆಕ್‌ಪೋಸ್ಟ್‌ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು ಎಸ್ಪಿ ಭೇಟಿ ನೀಡಿದ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ವಾಹನ ತಪಾಸಣೆಯನ್ನು ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸುವಂತೆ ಸಲಹೆ ಸೂಚನೆಗಳನ್ನು ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

57 seconds ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

1 hour ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

2 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

4 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

6 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

6 hours ago