ಬೆಂಗಳೂರು : ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ತಡರಾತ್ರಿ 1 ಗಂಟೆ ವೇಳೆಗೆ ಮಲ್ಲೇಶ್ವರಂನ ತವರು ಮನೆ ತಲುಪಿದೆ. ಸಾವಿನಿಂದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಗಣ್ಯರು, ಆಪ್ತರು, ಸ್ನೇಹಿತರು ಹಾಗೂ ಸಿನಿ ತಾರೆಯರು ಕಂಬನಿ ಮಿಡಿದಿದ್ದಾರೆ. ಮೃತದೇಹ ನೋಡುತ್ತಿದ್ದಂತೆಯೇ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು.
ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಸ್ಪಂದನಾ ಸ್ನೇಹಿತೆ ನಟಿ ಅನು ಪ್ರಭಾಕರ್ ಸೇರಿದಂತೆ ಹಲವು ಗಣ್ಯಮಾನ್ಯರು ಮಲ್ಲೇಶ್ವರಂನ ಮನೆಗೆ ಆಗಮಿಸಿದ್ದಾರೆ. ನಟ ವಿಜಯರಾಘವೇಂದ್ರ, ಶ್ರೀಮುರಳಿ, ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್, ಶಾಸಕ ಮುನಿರತ್ನ, ಮಾವ ಚಿನ್ನೇಗೌಡ ಹಲವು ಪ್ರಮುಖರು ಸ್ಥಳದಲ್ಲಿದ್ದಾರೆ. ಅಂಬುಲೆನ್ಸ್ ಮಲ್ಲೇಶ್ವರಂನ ತವರು ಮನೆ ತಲುಪುತ್ತಿದ್ದಂತೆ ಮೃತದೇಹ ನೋಡಲು ನೆರೆದಿದ್ದ ಜನ ಮುಗಿಬಿದ್ದರು. ಅಂಬುಲೆನ್ಸ್ ಬಳಿ ತಳ್ಳಾಟ, ನೂಕಾಟ ನಡೆಯಿತು.
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…
ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…
ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…