ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಪ್ರೀತ್ ಅವರು ಇಂದು (ಸೋಮವಾರ, ಮೇ.20) ತೀರ್ಪು ಪ್ರಕಟಿಸಿದರು. ತೀರ್ಪಿನನ್ವಯ ರೇವಣ್ಣ ಅವರಿಗೆ 5 ಲಕ್ಷ ರೂ. ಮೊತ್ತದ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವುದು ಸೇರಿದಂತೆ ಹಲವು ಷರತ್ತುಗಳ ಜತೆ ಜಾಮೀನು ನೀಡಲಾಗಿದೆ.
ಎಚ್.ಡಿ ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ 47 ವರ್ಷದ ಮನೆ ಕೆಲಸದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಕುರಿತು ಏ.28 ರಂದು ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಆರೋಪದ ವಿರುದ್ಧ ಜಾಮೀನು ಕೋರಿ ಎಚ್.ಡಿ ರೇವಣ್ಣ ಕೋರ್ಟ್ ಮೋರೆ ಹೋಗಿದ್ದರು.