ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ವರಣ ಕೃಪೆ ತೋರದ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರ ಮನವಿ ಮೇರೆಗೆ ವೈದಿಕ ಡಾ.ಭಾನುಪ್ರಕಾಶ ಶರ್ಮ ನೇತೃತ್ವದಲ್ಲಿ ಮಂಗಳವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಪರ್ಜನ್ಯ ಹೋಮ ನಡೆಸಲಾಯಿತು.
ಮಳೆಗಾಗಿ ಪ್ರಾರ್ಥಿಸಿ ಕೆಆರ್‌ಎಸ್ ಡ್ಯಾಂನ ಕಾವೇರಿ ಮಾತೆ ಪ್ರತಿಮೆ ಮುಂಭಾಗ 12 ಮಂದಿ ವೈದಿಕ ತಂಡದಿಂದ ಪರ್ಜನ್ಯ ಹೋಮ ಸೇರಿದಂತೆ ವಿವಿಧ ವಿಶೇಷ ಪೂಜೆ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದಾಗಿ ಬೆಳೆ ಬೆಳೆದಿರುವ ರೈತರಲ್ಲಿ ತೀವ್ರ ಆತಂಕ ಮೂಡಿದೆ. ಇದರಿಂದಾಗಿ ಪರ್ಜನ್ಯ ಹೋಮ ಸೇರಿದಂತೆ ವಿವಿಧ ಬಗೆಯ ಪೂಜೆಗಳನ್ನು ಮಾಡಲಾಯಿತು ಎಂದರು.
ಈಗಾಗಲೇ ನಾಲೆಗಳಿಗೆ ನೀರು ನಿಲ್ಲಿಸಿರುವುದರಿಂದ ಬೆಳೆಗಳು ಒಣಗುತ್ತಿವೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 81 ಅಡಿಗೆ ಕುಸಿದಿದೆ. ಹೀಗಾಗಿ ಪರ್ಜನ್ಯ ಹೋಮದ ಮೊರೆ ಹೋಗಬೇಕಾಯಿತು ಎಂದು ಹೇಳಿದರು.
ಪರ್ಜನ್ಯ ಹೋಮ ನಡೆಸಿದಾಗಲೆಲ್ಲ ಉತ್ತಮ ಮಳೆಯಾಗಿ ಡ್ಯಾಂ ಭರ್ತಿಯಾಗಿದೆ. 2021 ರಲ್ಲೂ ಮಳೆ ಕೈಕೊಟ್ಟಾಗ ಭಾನುಪ್ರಕಾಶ ಶರ್ಮ ನೇತೃತ್ವದಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪೂಜೆ ನೆರವೇರಿಸಲಾಗಿತ್ತು. ಇದಾದ ಬಳಿಕ ಎರಡೇ ದಿನದಲ್ಲಿ ಮಳೆ ಸುರಿದು ಡ್ಯಾಂ ಸಂಪೂರ್ಣ ಭರ್ತಿಯಾಗಿತ್ತು ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಪೂಜೆ ಮಾಡುವಂತೆ ವೈದಿಕ ಭಾನುಪ್ರಕಾಶ ಶರ್ಮ ಅವರಲ್ಲಿ ನಾನು ಮನವಿ ಮಾಡಲಾಗಿ ಪರ್ಜನ್ಯ ಜಪ, ಹೋಮ, ಕಳಶ ಸ್ಥಾಪನೆ, ಮಹಾ ಗಣಪತಿ ಪೂಜೆ, ಪುಣ್ಯಹಾದಿ, ಆದಿತ್ಯ ಪೂಜೆ, ಮಳೆಯ ದೇವತೆಗಳ ಆಹ್ವಾಹನೆ, ರುದ್ರಾಭಿಷೇಕ ಮೂಲಮಂತ್ರಗಳನ್ನು ಜಪಿಸುತ್ತಾ ವೈದಿಕರಿಂದ ವಿಶೇಷ ಪೂಜೆ ಮಾಡಲಾಗಿದೆ ಎಂದು ವಿವರಿಸಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…