BREAKING NEWS

ಎಕ್ಸ್‌ಪ್ರೆಸ್ ಹೈವೇಯಲ್ಲಿ ಸ್ಪೀಡ್‌ ಬ್ರೇಕ್‌ ಮಾಡಿದ ವಾಹನ ಸವಾರರಿಗೆ ಬಿತ್ತು ಬರೋಬ್ಬರಿ 1 ಲಕ್ಷ ರೂ. ದಂಡ

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ವೇಗಮಿತಿ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ಮದ್ದೂರು ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ, ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮದ್ದೂರು ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಮಾರ್ಗದರ್ಶನದಲ್ಲಿ ಎಕ್ಸ್‌ಪ್ರೆಸ್‌ವೇನಲ್ಲಿ ರಾಡಾರ್‌ಗನ್ ಸಮೇತ ಕಾರ್ಯಾಚರಣೆಗಿಳಿದ ಸಂಚಾರಿ ಠಾಣೆ ಪಿಎಸ್‌ಐಗಳಾದ ಸಿದ್ದರಾಜು, ಆಯ್ಯನ್‌ಗೌಡ, ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಆರ್.ಬಿ. ಉಮೇಶ್ ಹಾಗೂ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ಮಿತಿ ಮೀರಿದ ವೇಗದಲ್ಲಿ ಚಾಲನೆ ಮಾಡುತ್ತಿದ್ದ ನೂರಾರು ವಾಹನಗಳ ಚಾಲಕರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ಸುಮಾರು ಒಂದು ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿ ಸಾವು-ನೋವು ಸಂಭವಿಸುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಅಪಘಾತ ತಡೆಯಲು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ಮೀತಿ ಮೀರಿದ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವಾಹನ ಚಾಲಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶ ನೀಡಿದ್ದರು.

ಆದ್ದರಿಂದ ಪೊಲೀಸರು ಪ್ರಥಮ ಹಂತದಲ್ಲಿ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ವಾಹನ ಚಾಲನೆ ಮಾಡುವ ಚಾಲಕರಿಗೆ ಸ್ವಯಂ ಕಡಿವಾಣ ಹಾಕುವಂತೆ ಕರ ಪತ್ರದ ಮೂಲಕ ಜಾಗೃತಿ ಮೂಡಿಸಿದ್ದರೂ ಪ್ರಯೋಜನ ಆಗಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿ ಅತಿ ವೇಗವಾಗಿ ವಾಹನ ಚಲಾಯಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

 

lokesh

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

22 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

31 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago