BREAKING NEWS

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳಿಗೆ ವೇಗ ಮಿತಿ

ಬೆಂಗಳೂರು : ಕರ್ನಾಟಕದ ಮೊದಲ ಎಕ್ಸಪ್ರೆಸ್​​​ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಅತೀ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವುದರಿಂದ ವಾಹನಗಳ ವೇಗ ಮಿತಿ 100 ಜಾರಿಗೊಳಿಸಲು ಪೊಲೀಸ್​ ಇಲಾಖೆ ಪ್ಲ್ಯಾನ್ ಮಾಡಿಕೊಂಡಿದೆ. ಈ ಬಗ್ಗೆ ಎಡಿಜಿಪಿ ಅಲೋಕ್​ ಮೋಹನ್ ಹಾಗೂ ಮೈಸೂರು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.​

ಮೊನ್ನೇ ಅಷ್ಟೇ ಅಲೋಕ್ ಮೋಹನ್ ಅವರು ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ವೇನಲ್ಲಿ ಸಂಚರಿಸಿ ಅತಿ ಹೆಚ್ಚು ಅಪಘಾತವಾಗುವ ಸ್ಪಾಟ್​ಗಳನ್ನು ಪರಿಶೀಲನೆ ಮಾಡಿದ್ದರು. ಬಳಿಕ ರಾಮನಗರದಲ್ಲಿ ಮಾತನಾಡಿದ್ದ ಅಲೋಕ್ ಮೋಹನ್, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದಾಗಿನಿಂದಲೂ ಹೆಚ್ಚಿನ ಸಂಖ್ಯೆಯ ಅಪಘಾತಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು 119 ಕಿಲೋಮೀಟರ್ ವರೆಗಿನ ಹೆದ್ದಾರಿಯಲ್ಲಿ ಸ್ಪೀಡ್ ರಾಡಾರ್ ಗನ್ ಮತ್ತು ವಾಹನ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಒಂದು ವೇಳೆ ವಾಹನ ಮಿತಿಗಿಂತ ವೇಗವಾಗಿ ಚಲಿಸುತ್ತಿದ್ದರೆ ಸ್ಪೀಡ್ ರಾಡಾರ್ ಗನ್​ನಲ್ಲಿ ಸೆರೆಯಾಗಲಿದ್ದು, ವಾಹನ ಸಂಖ್ಯೆಗೆ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಮಧ್ಯಮ ಗಾತ್ರದ ವಾಹನಗಳನ್ನು ಚಾಲನೆ ಮಾಡುವವರು ಅತಿವೇದ ಅಥವಾ ಅಜಾಗರೂಕತೆಯ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡುವುದರಿಂದ ಮಾತ್ರ ಅಪಘಾತಗಳು ಸಂಭವಿಸುತ್ತವೆ. ಇದು ಅವೈಜ್ಞಾನಿಕ ರಸ್ತೆಯಿಂದಲ್ಲ. ಈ ಎಕ್ಸ್‌ಪ್ರೆಸ್‌ ವೇ ರೇಸಿಂಗ್ ಟ್ರ್ಯಾಕ್ ಅಲ್ಲ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು. ಆದರೆ ತಡೆರಹಿತ ಪ್ರಯಾಣಕ್ಕಾಗಿ ನಿರ್ಮಾಣ ಮಾಡಲಿದೆ ಎಂಬ ಅರಿವು ಇರಬೇಕು ಎಂದಿದ್ದಾರೆ.

ಎಕ್ಸ್‌ಪ್ರೆಸ್‌ ವೇಯನ್ನು ವಾಹನಗಳು ಗಂಟೆಗೆ 120 ಕಿಮೀ ಗರಿಷ್ಠ ವೇಗದ ಮಿತಿಯೊಂದಿಗೆ ಚಲಿಸಲು ವಿನ್ಯಾಸಗೊಳಿಸಲಾಗಿದೆ. 80 ಕಿಮೀ ನಿಂದ 100 ಕಿಮೀ ವೇಗದಲ್ಲಿ ಪ್ರಯಾಣಿಸುವಾಗ ಅಪಘಾತಗಳು ಸಂಭವಿಸುವುದಿಲ್ಲ. ಇಷ್ಟು ವೇಗದಲ್ಲಿ ಪ್ರಯಾಣಿಸಿದರೂ ಒಂದೂವರೆ ಗಂಟೆಯಲ್ಲಿ ಬೆಂಗಳೂರು ತಲುಪಬಹುದು. ಜನರು 10-15 ನಿಮಿಷಗಳನ್ನು ಉಳಿಸುವುದಕ್ಕಾಗಿ ವೇಗದ ಮಿತಿಯನ್ನು ದಾಟಬಾರದು. ಐಷಾರಾಮಿ ಕಾರಿನಲ್ಲಿ, ಕೆಲವರು 140-150 ಕಿಮೀ ವೇಗದಲ್ಲಿ ಚಾಲನೆ ಮಾಡುತ್ತಿದ್ದರೆ ಅದನ್ನು ಹೇಗೆ ನಿಯಂತ್ರಿಸಬಹುದು? ಇದು ಅಪಘಾತಕ್ಕೆ ಕಾರಣವಾಗುತ್ತದೆ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ.

ವರದಿಗಳ ಪ್ರಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಈ ಆರು ಪಥಗಳ ಮುಖ್ಯ ಹೆದ್ದಾರಿಯಲ್ಲಿ ದ್ವಿಚಕ್ರ, ಮತ್ತು ತ್ರಿಚಕ್ರ ವಾಹನಗಳನ್ನು ನಿಷೇಧಿಸಲು ತೀರ್ಮಾನಿಸಿದ್ದು, ಸರ್ವೀಸ್ ರಸ್ತೆಯಲ್ಲಿ ಮಾತ್ರ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುಲು ನಿರ್ಧರಿಸಿದೆ.

ಈ ವರ್ಷದ ಅಂದರೆ ಮಾರ್ಚ್‌ನಲ್ಲಿ ಉದ್ಘಾಟನೆಗೊಂಡ ನಂತರ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಗಳ ಮೂಲಕ ತಿಳಿದುಬಂದಿದೆ.

lokesh

Recent Posts

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

31 mins ago

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

36 mins ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

42 mins ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

2 hours ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

2 hours ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

2 hours ago