ರಾಮನಗರ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್ ರೇಡಾರ್ ಗನ್ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಎಕ್ಸ್‌ಪ್ರೆಸ್ ವೇನಲ್ಲಿ ಸಂಭವನೀಯ ಅಪಘಾತಗಳನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಈಗಾಗಲೇ ಹೆದ್ದಾರಿಯಲ್ಲಿ ಪ್ರತಿ ಗಂಟೆಗೆ ಕನಿಷ್ಠ 80 ಕಿ.ಮೀ ನಿಂದ ಗರಿಷ್ಠ 100 ಕಿ.ಮೀ ವೇಗದ ಮಿತಿ ವಿಧಿಸಲಾಗಿದ್ದು, ಆ ಬಗ್ಗೆ ಫಲಕಗಳನ್ನು ಹಾಕಲಾಗಿದೆ.
120 ಕಿ.ಮೀ ವೇಗದಲ್ಲಿ ವಾಹನಗಳು ಚಲಿಸುವುದರಿಂದ ಅಪಘಾತಗಳು ನಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಗಂಟೆಗೆ 100 ಕಿ.ಮೀ ವೇಗವನ್ನು ಮಿತಿಗೊಳಿಸಲಾಗಿದ್ದು ಶಿಸ್ತಾಗಿ ಪಾಲಿಸಲು, ಹೆದ್ದಾರಿಯಲ್ಲಿ ಸ್ಪೀಡ್ ರೇಡಾರ್ ಗನ್ ಮತ್ತು ವಾಹನದ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ.
100 ಕಿ.ಮೀ.ಗಿಂತಲೂ ಅಧಿಕ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನಿನ್ನೆ ರಾಮನಗರ ಪೊಲೀಸರು 44 ಪ್ರಕರಣಗಳನ್ನು ದಾಖಲಿಸಿದ್ದರು. ಇನ್ನು ಎಕ್ಸ್ ಪ್ರೆಸ್ ವೇನಲ್ಲಿ ವೇಗದ ಮಿತಿ ಹಾಕಿರುವುದಕ್ಕೆ ಸಂಚಾರಿ ಪೊಲೀಸರ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.
ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ…
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…