Mysore
23
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಗೋಮಾಂಸ ಸಾಗಿಸುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ ಕಾರ್ಯಕರತರು

ಚಿಕ್ಕಬಳ್ಳಾಪುರ : ಅಕ್ರಮವಾಗಿ ರಾಶಿರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ 4 ಬೊಲೆರೋ ಪಿಕ್‌ಅಪ್ ಹಾಗೂ 1 ಮಿನಿ ಟೆಂಪೋ ಮೂಲಕ ಲೋಡ್‌ಗಟ್ಟಲೆ ಗೋಮಾಂಸ ಸಾಗಾಟ ಮಾಡುತ್ತಿದ್ದು, ಆ ವಾಹನಗಳಿಗೆ ಮುಂದೆ ಎಸ್ಕಾರ್ಟ್ ವಾಹನವಾಗಿ ಕಾರು ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ಈ 5 ವಾಹನಗಳನ್ನು ತಡೆದ ಶ್ರೀರಾಮ ಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಚಳಿ ಬಿಡಿಸಿದ ಬಳಿಕ ಅವರ ತಲೆಯ ಮೇಲೆ ಗೋವಿನ ಕಡಿದ ತಲೆ ಹೊರಿಸಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿಸಿದ್ದಾರೆ. ಘೋಷಣೆ ಕೂಗದೆ ಇದ್ದಾಗ, ತಲೆಯ ಮೇಲೆ ಗೋವು ಹೊರಲು ಹಿಂದೇಟು ಹಾಕಿದವರಿಗೆ ಕೋಲಿನಿಂದ ಬಾರಿಸಲಾಗಿದೆ. ಇದಾದ ನಂತರ ಕಾರಿಗೆ ಬೆಂಕಿ ಹಚ್ಚಲಾಗಿದೆ.

ವಿಷಯ ತಿಳಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಡಿವೈಎಸ್ ಪಿ ರವಿ ಘಟನಾ ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣವಿದ್ದು, ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!