ಅಯೋಧ್ಯೆ : ಇಂದು ಅಯೋಧ್ಯೆಗೆ ನಮ್ಮೆಲ್ಲರ ರಾಮ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆಯಲ್ಲಿ ಎಲ್ಲರಿಗೂ ಶುಭಾಶಯ ಎಂದು ಪ್ರಧಾನಿ ನರೇಂದ್ರ ಮೋದಿ ಸಮತಸ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದ ನಂತರ ದೇವಾಲಯದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಹೇಳಲು ಎಷ್ಟೊಂದು ವಿಷಯಗಳು ಇವೆ. ಆದ್ರೆ ಮಾತುಗಳು ಹೊರಳದೇ ಗಂಟಲು ಕಟ್ಟುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್ ನಲ್ಲಿ ಇರಲ್ಲ . ನಮ್ಮ ರಾಮಲಲ್ಲ ದಿವ್ಯ ಮಂದಿರದಲ್ಲಿ ಇರುತ್ತಾನೆ . ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದಿದ್ದಾರೆ.
ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ. ಪ್ರಭು ಶ್ರೀರಾಮನ ಬಳಿ ನಾನು ಕ್ಷಮೆಯಾಚಿಸುತ್ತೇನೆ. ಇಷ್ಟು ವರ್ಷಗಳ ಕಾಲ ನಾವು ಸಮಯ ತೆಗೆದುಕೊಂಡಿದ್ದಕ್ಕೆ ಕ್ಷಮೆಯಾಚಿಸುವೆ. ಪ್ರಭು ಶ್ರೀರಾಮನ ಆಗಮನದಿಂದ ಇಡೀ ದೇಶ ಸಂಭ್ರಮಗೊಂಡಿದೆ ಎಂದು ಮೋದಿ ಹೇಳಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…