ಬೆಂಗಳೂರು : ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ.
ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.
ಬೆಂಗಳೂರಿನ ನ್ಯೂ ಮೆಕಾಲೆ ಶಾಲೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಜಿಲ್ಲೆಯ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಯಶಸ್ಗೌಡ, ಸವದತ್ತಿಯ ಶ್ರೀಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ನಾಗರಬೆಟ್ಟದ ಆಕ್ಸ್ಫರ್ಡ್ ಆಂಗ್ಲ ಶಾಲೆಯ ಭೀಮನಗೌಡ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಜಿಲ್ಲಾವಾರು ಫಲಿತಾಂಶ
ಚಿತ್ರದುರ್ಗ -ಶೇ.96.8
ಮಂಡ್ಯ-ಶೇ.96.74
ಹಾಸನ-ಶೇ.96.68
ಬೆಂಗಳೂರು ಗ್ರಾಮಾಂತರ-ಶೇ.96.48
ಚಿಕ್ಕಬಳ್ಳಾಪುರ-ಶೇ.96.15
ಕೋಲಾರ-ಶೇ.94.6
ಚಾಮರಾಜನಗರ -ಶೇ.,94.32
ಮಧುಗಿರಿ- ಶೇ.93.23
ಕೊಡಗು-ಶೇ.93.19
ವಿಜಯನಗರ- ಶೇ.91.41
ವಿಜಯಪುರ- ಶೇ. 91.23
ಚಿಕ್ಕೋಡಿ-91.07
ಉತ್ತರಕನ್ನಡ- ಶೇ.90.53
ದಾವಣಗೆರೆ- ಶೇ.90.43
ಕೊಪ್ಪಳ- ಶೇ.90.27
ಮೈಸೂರು ಜಿಲ್ಲೆ- ಶೇ.89.75
ಚಿಕ್ಕಮಗಳೂರು-ಶೇ.89.69
ಉಡುಪಿ- ಶೇ. 89.49
ದಕ್ಷಿಣ ಕನ್ನಡ- ಶೇ. 89.47
ತುಮಕೂರು- ಶೇ. 89.43
ರಾಮನಗರ- ಶೇ. 89.42
ಹಾವೇರಿ ಶೇ.89.11
ಶಿರಸಿ- ಶೇ.87.39
ಧಾರವಾಡ-ಶೇ.86.55
ಗದಗ-ಶೇ.86.51
ಬೆಳಗಾವಿ-ಶೇ.85.85
ಬಾಗಲಕೋಟೆ-ಶೇ.85.14
ಕಲಬುರಗಿ- ಶೇ.84.51
ಶಿವಮೊಗ್ಗ-ಶೇ.84.04
ರಾಯಚೂರು- ಶೇ. 84.02
ಬಳ್ಳಾರಿ- ಶೇ.81.54
ಬೆಂಗಳೂರು ಉತ್ತರ ಶೇ.80.93
ಬೆಂಗಳೂರು ದಕ್ಷಿಣ ಶೇ.78.95
ಬೆಂಗಳೂರು ಪಶ್ಚಿಮ ಶೇ.80.93
ಬೀದರ್ ಶೇ. 78.73
ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…
ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…