ಬೆಂಗಳೂರು: ಇಂದು (ಮೇ.9) ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಕೂಡಾ ರಾಜ್ಯದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮೊದಲನೇ ಸ್ಥಾನ ಪಡೆದರೆ ಮೈಸೂರಿಗೆ ಏಳನೇ ಸ್ಥಾನ ಲಭಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಾದ ಮಂಜುಶ್ರೀ ಅವರು ಮಾಹಿತಿ ನೀಡಿದ್ದಾರೆ.
ಈ ಬಾರಿ ರಾಜ್ಯಾದ್ಯಂತ ಶೇಕಡವಾರು 73.4 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಬಾರಿ ಒಟ್ಟು 8,59, 967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 6,31,204 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಬಾಲಕರು 287416 ತೇರ್ಗಡೆ ಹೊಂದಿದ್ದು, 3,43,788 ಬಾಲಕೀಯರು ಪಾಸಾಗಿದ್ದು, ಬಾಲಕರಿಗಿಂತ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕರ ಶೇಕಡವಾರು 65.90 ರಷ್ಟು ಇದ್ದರೇ, ಶೇ 81.11 ರಷ್ಟು ಬಾಲಕೀಯರು ಪಾಸಾಗಿದ್ದಾರೆ.
ಉಡುಪಿಗೆ ಮೊದಲ ಸ್ಥಾನ. ಮೈಸೂರಿಗೆ ಏಳನೇ ಸ್ಥಾನ!
ಇನ್ನು ಜಿಲ್ಲಾವಾರು ಶೇಕಡ ಫಲಿತಾಂಶದಲ್ಲಿ ಉಡುಪಿಗೆ ಮೊದಲ ಸ್ಥಾನ ಲಭಿಸಿದೆ. ಉಡುಪಿ ಜಿಲ್ಲೆಯ ಶೇ. 94 ರಷ್ಟು ಫಲಿತಾಂಶ ಬಂದರೆ, ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಶೇ. 50.59 ಫಲಿತಾಂಶ ಹೊಂದಿದ್ದು, ಕೊನೆಯ ಸ್ಥಾನದಲ್ಲಿದೆ. ಕ್ರಮವಾಗಿ ಎರಡನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಶೇ. 92.12, ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಶೇ 88.67 ನಾಲ್ಕನೇ ಸ್ಥಾನದಲ್ಲಿ ಕೊಡಗು ಶೇ 88.67 ರಷ್ಟು ತೇರ್ಗಡೆ ಫಲಿತಾಂಶ ಹೊಂದಿವೆ.
ಇನ್ನು ಬಾಗಲಕೋಟೆಯ ಅಂಕಿತಾ ಬಸಪ್ಪ ಎಂಬುವವರು 625/625 ರಷ್ಟು ಅಂಕಗಳಿಸಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…