BREAKING NEWS

ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವಂತಿಲ್ಲವೆಂಬ ಆದೇಶ ರಾಜ್ಯ ಸರ್ಕಾರದ್ದಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳು ಕುರಿತಂತೆ ನೂತನ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಆದೇಶಿಸಿದೆ ಎಂದು ಹೇಳಲಾಗುತ್ತಿದೆ.

ಬಿಸಿಯೂಟ ತಯಾರು ಮಾಡುವ ಅಡುಗೆ ಸಿಬ್ಬಂದಿ ಬಹುತೇಕ ಮಹಿಳೆಯರು ಬಳೆ, ಬಿಂದಿಗೆ ಧರಿಸುತ್ತಾರೆ. ಆದರೆ ಇದೀಗ ಶಿಕ್ಷಣ ಇಲಾಖೆಯ ಆದೇಶದಿಂದ ಅನೇಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮುಖ್ಯಮಂತ್ರಿ ಸ್ಪಷ್ಟನೆ: ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ  ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ, ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವಲ್ಲ ಎಂದಿದ್ದಾರೆ.

andolanait

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

4 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

4 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

4 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

4 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

5 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

5 hours ago