ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ.
ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳು ಕುರಿತಂತೆ ನೂತನ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಆದೇಶಿಸಿದೆ ಎಂದು ಹೇಳಲಾಗುತ್ತಿದೆ.
ಬಿಸಿಯೂಟ ತಯಾರು ಮಾಡುವ ಅಡುಗೆ ಸಿಬ್ಬಂದಿ ಬಹುತೇಕ ಮಹಿಳೆಯರು ಬಳೆ, ಬಿಂದಿಗೆ ಧರಿಸುತ್ತಾರೆ. ಆದರೆ ಇದೀಗ ಶಿಕ್ಷಣ ಇಲಾಖೆಯ ಆದೇಶದಿಂದ ಅನೇಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮುಖ್ಯಮಂತ್ರಿ ಸ್ಪಷ್ಟನೆ: ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ, ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವಲ್ಲ ಎಂದಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…