Mysore
23
overcast clouds
Light
Dark

ಪ್ರಧಾನಿಗೆ ರಕ್ತದಿಂದ ಪತ್ರ ಬರೆದ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಮಂಡ್ಯ, ರಾಮನಗರದಲ್ಲಿ ಉಗ್ರ ಪ್ರತಿಭಟನೆಗಳು ಮುಂದುವರೆದಿವೆ. ಇದರ ನಡುವೆ ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಕ್ತದ ಮೂಲಕ ಪತ್ರ ಬರೆದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಅಭಿಯಾನ ಆರಂಭಿಸಿದ್ದಾರೆ. ಕಾವೇರಿ ನಮ್ಮದು. ಕಾವೇರಿ ವಿಚಾರವಾಗಿ ರಾಜ್ಯಕ್ಕೆ ನ್ಯಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿದ್ದಾರೆ.

ಕರವೇ ನಾರಾಯಣ ಗೌಡ ಅವರು ರಕ್ತದ ಮೂಲಕ ಸುಮಾರು 75 ಪದ ಬರೆದು ಮೋದಿ ಅವರಿಗೆ ಕಾವೇರಿ ನೀರಿಗಾಗಿ ಮನವಿ ಮಾಡಿದ್ದಾರೆ. ಕರವೇ ಕಾರ್ಯಕರ್ತರಿಂದಲೂ ರಕ್ತದ ಮೂಲಕ 5 ಪದ ಬರೆದು ಪತ್ರ ಫೋಸ್ಟ್ ಮಾಡಲಾಗಿದೆ. ಪ್ರಧಾನಿಗಳೇ ಕಾವೇರಿ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅಂತ ಗಾಂಧೀನಗರದ ಕರವೇ ಕೇಂದ್ರ ಕಚೇರಿಯಲ್ಲಿ ರಕ್ತದಲ್ಲಿ ಪತ್ರ ಬರೆದು ಚಳುವಳಿ ಆರಂಭಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಕ್ತದಲ್ಲಿ ಪತ್ರ ಬರೆದು ಅಭಿಯಾನ ಮಾಡಲಾಗುತ್ತದೆ. ಒಂದು ಲಕ್ಷಕ್ಕೂ ಅಧಿಕ ರಕ್ತದ ಪತ್ರವನ್ನು ಬರೆದು ಕೂಡಲೇ ಪ್ರಧಾನಿ ಕಚೇರಿ ವಿಳಾಸಕ್ಕೆ ಪೋಸ್ಟ್‌ ಮಾಡಲು ಕರವೇ ಮುಂದಾಗಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ