BREAKING NEWS

ಸನಾತನ ಧರ್ಮ ವಿರುದ್ಧ ಹೇಳಿಕೆ: ಸಚಿವ ಉದಯನಿಧಿಗೆ ಸುಪ್ರೀಂಕೋರ್ಟ್​ ನೋಟಿಸ್‌

ನವದೆಹಲಿ : ‘ಸನಾತನ ಧರ್ಮ’ ಕುರಿತು ವಿವಾದಾತ್ಮಕ ಹೇಳಿಕೆಗೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ ಮತ್ತು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿ ನಿರ್ಮೂಲನೆ ಮಾಡಬೇಕೆಂಬ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯ ವಿರುದ್ಧ ಭಾರೀ ವಿರೋಧ ವ್ಯಕ್ತವಾಗಿತ್ತು. ಮತ್ತೊಬ್ಬ ಡಿಎಂಕೆ ನಾಯಕ ಎ ರಾಜಾ ಕೂಡ ಸನಾತನ ಧರ್ಮದ ವಿರುದ್ಧ ಮಾತನಾಡಿದ್ದರು.

ಆದರೆ ಈ ಟೀಕೆಗಳಿಂದ ಕಂಗೆಡದ ಉದಯನಿಧಿ ಸ್ಟಾಲಿನ್, ಈ ವಿವಾದಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದರು.

ಅಸ್ಪ್ರಶ್ಯತೆ ನಾಶಕ್ಕೂ ಸನಾತನ ಧರ್ಮಕ್ಕೂ ಸಂಬಂಧ : ಈ ಮುನ್ನ ಉದಯನಿಧಿ ಸ್ಟಾಲಿನ್ ಸನಾತನದ ನಿರ್ಮೂಲನೆಯಾದಾಗ ಮಾತ್ರ ಅಸ್ಪೃಶ್ಯತೆಯೂ ಕೊನೆಗೊಳ್ಳುತ್ತದೆ ಎಂದು ಹೇಳಿದ್ದರು. ಅಸ್ಪೃಶ್ಯತೆ ತೊಲಗಬೇಕಾದರೆ ಸನಾತನ ಧರ್ಮ ನಿರ್ಮೂಲನೆಯಾಗಬೇಕು ಎಂದು ತಮಿಳುನಾಡು ಕ್ರೀಡಾ ಮತ್ತು ಯುವಜನ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಸನಾತನ ಧರ್ಮ ನಾಶವಾದರೆ ಅಸ್ಪೃಶ್ಯತೆಯೂ ತಾನಾಗಿಯೇ ಅಂತ್ಯವಾಗುತ್ತದೆ ಎಂದಿದ್ದರು.

ರಾಜ್ಯದಲ್ಲಿ ಸಾಮಾಜಿಕ ತಾರತಮ್ಯ ಕುರಿತು ತಮಿಳುನಾಡು ರಾಜ್ಯಪಾಲರ ಹೇಳಿಕೆಗೆ ಪ್ರತಿಕ್ರಿಯಿಸಿದ ಉದಯನಿಧಿ ಈ ಹೇಳಿಕೆ ನೀಡಿದ್ದರು. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ ಎಂದು ಹೇಳಿದ್ದರು,

andolanait

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

39 mins ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

41 mins ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

44 mins ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

46 mins ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

50 mins ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

57 mins ago