BREAKING NEWS

ಹಾಸನದಲ್ಲಿ ಮುಂದುವರಿದ ಕಾಡಾನೆಗಳ ಉಪಟಳ

ಹಾಸನ : ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಬೇಲೂರಿನ ಮಲಸಾವರ ಗ್ರಾಮದಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆಯನ್ನು ನಾಶಮಾಡಿವೆ. ಗಜಪಡೆ ಬೆಳೆಗಳ ಮೇಲೆ ದಾಳಿ ಮಾಡುವುದನ್ನು ರೈತರು ಮೊಬೈಲ್‍ನಲ್ಲಿ ವೀಡಿಯೋ ಮಾಡಿ ಅರಣ್ಯಾಧಿಕಾರಿಗಳ ಮುಂದಿಟ್ಟು ಅಳಲು ತೋಡಿಕೊಂಡಿದ್ದಾರೆ.

20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ಕಾಫಿ, ಮೆಣಸು, ಏಲಕ್ಕಿ, ಅಡಕೆ ಗಿಡಗಳು ಹಾಗೂ ನಾಟಿ ಮಾಡಿದ್ದ ಭತ್ತದ ಗದ್ದೆಯನ್ನು ತುಳಿದು ಸಂಪೂರ್ಣವಾಗಿ ನಾಶ ಮಾಡಿವೆ. ಗ್ರಾಮದ ತೀರ್ಥಕುಮಾರ್, ಕಲ್ಲೇಶ್, ವಿಜಯ್, ಮಲ್ಲೇಶ್ ಹಾಗೂ ಇನ್ನಿತರ ರೈತರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಈ ದೃಶ್ಯವನ್ನು ರೈತರೊಬ್ಬರು ಎತ್ತರದ ಮರದ ಮೇಲೆ ಕುಳಿತು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಿಂದ ರೈತರು ಕಂಗಾಲಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಕಾಡಾನೆಗಳು ಹಿಂಡಿನ ದಾಳಿಯಿಂದ ಆತಂಕಗೊಂಡಿರುವ ಸ್ಥಳೀಯರು ಜೀವ ಭಯದಿಂದ ತೋಟ, ಹೊಲ, ಗದ್ದೆಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

1 hour ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

1 hour ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

2 hours ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

2 hours ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

2 hours ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

3 hours ago