ಹಾಸನ : ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಬೇಲೂರಿನ ಮಲಸಾವರ ಗ್ರಾಮದಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆಯನ್ನು ನಾಶಮಾಡಿವೆ. ಗಜಪಡೆ ಬೆಳೆಗಳ ಮೇಲೆ ದಾಳಿ ಮಾಡುವುದನ್ನು ರೈತರು ಮೊಬೈಲ್‍ನಲ್ಲಿ ವೀಡಿಯೋ ಮಾಡಿ ಅರಣ್ಯಾಧಿಕಾರಿಗಳ ಮುಂದಿಟ್ಟು ಅಳಲು ತೋಡಿಕೊಂಡಿದ್ದಾರೆ.
20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ಕಾಫಿ, ಮೆಣಸು, ಏಲಕ್ಕಿ, ಅಡಕೆ ಗಿಡಗಳು ಹಾಗೂ ನಾಟಿ ಮಾಡಿದ್ದ ಭತ್ತದ ಗದ್ದೆಯನ್ನು ತುಳಿದು ಸಂಪೂರ್ಣವಾಗಿ ನಾಶ ಮಾಡಿವೆ. ಗ್ರಾಮದ ತೀರ್ಥಕುಮಾರ್, ಕಲ್ಲೇಶ್, ವಿಜಯ್, ಮಲ್ಲೇಶ್ ಹಾಗೂ ಇನ್ನಿತರ ರೈತರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಈ ದೃಶ್ಯವನ್ನು ರೈತರೊಬ್ಬರು ಎತ್ತರದ ಮರದ ಮೇಲೆ ಕುಳಿತು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.
ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಿಂದ ರೈತರು ಕಂಗಾಲಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಕಾಡಾನೆಗಳು ಹಿಂಡಿನ ದಾಳಿಯಿಂದ ಆತಂಕಗೊಂಡಿರುವ ಸ್ಥಳೀಯರು ಜೀವ ಭಯದಿಂದ ತೋಟ, ಹೊಲ, ಗದ್ದೆಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…