ರಾಯಚೂರು : ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಈ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ಜನರಲ್ ಸರ್ಜನ್ ಡಾ. ಚಂದ್ರಶೇಖರ ಮಾದಿನೂರು ಸಾವನ್ನಪ್ಪಿರುವ ವೈದ್ಯ.
ಎಂದಿನಂತೆ ರೋಗಿಗಳನ್ನ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಿದ್ದರು. ಸ್ವಲ್ಪ ಒತ್ತಡ ಎನ್ನಿಸಿದ್ದರಿಂದ ವಿಶ್ರಾಂತಿ ಪಡೆಯಲು ಮನೆಗೆ ತೆರಳಲು ಮುಂದಾದಾಗ ಮೆಟ್ಟಿಲು ಹತ್ತುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಆಸ್ಪತ್ರೆ ಮೇಲ್ಮಹಡಿಯಲ್ಲೇ ಮನೆಯಿದ್ದಿದುದರಿಂದ ಮೆಟ್ಟಿಲು ಹತ್ತಿ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಠಾತ್ ಹೃದಯಾಘಾತದಿಂದ ಸಾವು ಸಂಭವಿಸಿದ್ದು ಇಡೀ ಆಸ್ಪತ್ರೆಯಲ್ಲಿ ನೀರವ ಮೌನ ಆವರಿಸಿದೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…