23ನೇ ಮಹಾಪೌರರಾಗಿ ಸುನಂದ ಪಾಲನೇತ್ರ ಆಯ್ಕೆ

ಮೈಸೂರು: ಕಳೆದ ಎರಡೂವರೆ ವರ್ಷಗಳಿಂದ ಮೈಸೂರು ಮಹಾನಗರ ಪಾಲಿಕೆಯಲ್ಲಿ ಇದ್ದ ಕಾಂಗ್ರೆಸ್-ಜಾ.ದಳ ಮೈತ್ರಿ ಮುರಿದು ಬಿದ್ದಿದ್ದು, ನಗರಪಾಲಿಕೆಯ 37 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ.

23ನೇ ಮಹಾಪೌರರಾಗಿ ೫೯ನೇ ವಾರ್ಡಿನ ಸದಸ್ಯರಾದ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗುವ ಮೂಲಕ ನಗರಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಕಮಲವನ್ನು ಅರಳಿಸಿದ್ದಾರೆ.

ಕಳೆದ ಫೆಬ್ರವರಿ ತಿಂಗಳಲ್ಲಿ ನಡೆದಿದ್ದ ಚುನಾವಣೆಯಲ್ಲಿ ಪರಾಜಿತರಾಗಿ ಕಣ್ಣೀರು ಹಾಕಿ, ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದ ಸುನಂದಾ ಪಾಲನೇತ್ರ ಅವರು ಕೊನೆಗೂ 4ನೇ ಯತ್ನದಲ್ಲಿ ಯಶಸ್ವಿಯಾಗಿ ಬಹುವರ್ಷಗಳ ಕನಸನ್ನು ನನಸು ಮಾಡಿಕೊಂಡರು.

× Chat with us