ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ, ಪ್ರಫುಲ್ ಪಟೇಲ್ ಅವರು ಸೋಮವಾರ ಸಂಜೆ ಸಂಸದ ಸುನೀಲ್ ತಟ್ಕರೆ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ ಘೋಷಿಸಿದ್ದಾರೆ.
ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿದ್ದ ಜಯಂತ್ ಪಾಟೀಲ್ ಅವರನ್ನು ವಜಾಗೊಳಿಸಿ, ಅವರ ಸ್ಥಾನ ತಟ್ಕರೆ ಅವರನ್ನು ನೇಮಕ ಮಾಡಲಾಗಿದೆ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್ ಸಿಪಿ ಶಾಸಕಾಂಗ ಪಕ್ಷಧ ನಾಯಕರನ್ನಾಗಿ ನೇಮಿಸಲಾಗಿದೆ.
ಇದಕ್ಕೂ ಮೊದಲು, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಪಕ್ಷದ ವಿರುದ್ಧ ಬಂಡಾಯವೆದ್ದ ಅಜಿತ್ ಪವಾರ್ ಪರ ನಿಂತ ಪ್ರಫುಲ್ ಪಟೇಲ್ ಮತ್ತು ತಟ್ಕರೆ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದರು.
ಕಳೆದ ತಿಂಗಳು ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ರಾಜ್ಯಸಭಾ ಸದಸ್ಯ ಪಟೇಲ್ ಅವರು ಮುಂಬೈನಲ್ಲಿ ಪತ್ರಿಕಾಗೋಷ್ಠಿಯ ನಡೆಸಿ, ತಟ್ಕರೆ ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಜಯಂತ್ ಪಾಟೀಲ್ ಅವರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.
ಅಜಿತ್ ಪವಾರ್ ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರಾಗಲಿದ್ದಾರೆ ಎಂದು ಪಟೇಲ್ ತಿಳಿಸಿದ್ದಾರೆ.
“ಇಂದು ಗುರು ಪೂರ್ಣಿಮೆ; ಶರದ್ ಪವಾರ್ ನಮ್ಮನ್ನು ಆಶೀರ್ವದಿಸಲಿ ಎಂದು ನಾವೆಲ್ಲರೂ ಬಯಸುತ್ತೇವೆ” ಎಂದು ಪಟೇಲ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, ತಮ್ಮೊಂದಿಗೆ ಅತಿ ಹೆಚ್ಚು ಎನ್‌ಸಿಪಿ ಶಾಸಕರು ಇದ್ದು, ಪಕ್ಷದ ಇತರ ಶಾಸಕರಾದ ಜಯಂತ್ ಪಾಟೀಲ್ ಮತ್ತು ಜಿತೇಂದ್ರ ಅವದ್ ಅವರನ್ನು ಅನರ್ಹಗೊಳಿಸುವಂತೆ ವಿಧಾನಸಭಾ ಸ್ಪೀಕರ್‌ಗೆ ಪತ್ರ ನೀಡಿರುವುದಾಗಿ ತಿಳಿಸಿದ್ದಾರೆ.
ಪಕ್ಷ ಮತ್ತು ಶಾಸಕರು ತಮ್ಮೊಂದಿಗಿದ್ದು, ತಮ್ಮ ಹಾಗೂ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಎಂಟು ಸಚಿವರ ಅನರ್ಹತೆಗೆ ನೋಟಿಸ್ ನೀಡಿರುವುದು ಅರ್ಥಹೀನ ಎಂದು ಅಜಿತ್ ಪವಾರ್ ಹೇಳಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…