Mysore
24
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ : ಪ್ರಜ್ವಲ್ ರೇವಣ್ಣಗೆ ಬಿಗ್​​ ರಿಲೀಫ್

ನವದೆಹಲಿ : ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್​ ರಿಲೀಫ್ ಸಿಕ್ಕಂತಾಗಿದ್ದು, ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಎ.ಮಂಜು, ದೇವರಾಜೇಗೌಡ ಅವರು ಹೈಕೋರ್ಟ್​ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋಕೋರ್ಟ್ , ಪ್ರಜ್ವಲ್​ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.

ಇದರಿಂದ ಸಂಕಷ್ಟ ಸಿಲುಕಿದ್ದ ಪ್ರಜ್ವಲ್ ರೇವಲ್ ರೇವಣ್ಣ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಜೆಐ ಪೀಠ, ಕರ್ನಾಟಕ ಹೈಕೋರ್ಟ್ ಅಸಿಂಧು ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.

ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ರೇವಣ್ಣ ಅವರು ಹೆಚ್​ಡಿ ದೇವೇಗೌಡಗೆ ಕರೆ ಮಾಡಿ ಚರ್ಚಿಸಿದರು. ಈ ವೇಳೆ ನಾಳೆ ದೆಹಲಿಗೆ ಬಂದು ಸಂಸತ್ ಕಲಾಪಕ್ಕೆ ಹಾಜರಾಗುಂತೆ ದೇವೇಗೌಡ ಅವರು ಪ್ರಜ್ವಲ್​ಗೆ ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ