ನವದೆಹಲಿ : ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದ್ದು, ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಎ.ಮಂಜು, ದೇವರಾಜೇಗೌಡ ಅವರು ಹೈಕೋರ್ಟ್ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋಕೋರ್ಟ್ , ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.
ಇದರಿಂದ ಸಂಕಷ್ಟ ಸಿಲುಕಿದ್ದ ಪ್ರಜ್ವಲ್ ರೇವಲ್ ರೇವಣ್ಣ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಜೆಐ ಪೀಠ, ಕರ್ನಾಟಕ ಹೈಕೋರ್ಟ್ ಅಸಿಂಧು ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.
ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ರೇವಣ್ಣ ಅವರು ಹೆಚ್ಡಿ ದೇವೇಗೌಡಗೆ ಕರೆ ಮಾಡಿ ಚರ್ಚಿಸಿದರು. ಈ ವೇಳೆ ನಾಳೆ ದೆಹಲಿಗೆ ಬಂದು ಸಂಸತ್ ಕಲಾಪಕ್ಕೆ ಹಾಜರಾಗುಂತೆ ದೇವೇಗೌಡ ಅವರು ಪ್ರಜ್ವಲ್ಗೆ ಹೇಳಿದ್ದಾರೆ.
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…
ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಉತ್ತರ ಕೊಡಗಿನ ಗ್ರಾಮೀಣ ಹಾಗೂ ಅರಣ್ಯದ ಅಂಚಿನ ಪ್ರದೇಶ ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಚಲನವಲನ…