ನವದೆಹಲಿ: ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.
ಭ್ರಷ್ಟಾಚಾರ, ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ನೀಡಿದೆ. ಈ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸುಪ್ರೀಂಕೋಟ್ರ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅನಿರುದ್ಧ ಬೋಸ್ ನೇತೃತ್ವದ ಪೀಠ ವಿರೂಪಾಕ್ಷಪ್ಪಗೆ ನೋಟಿಸ್ ಜಾರಿ ಮಾಡಿತು.
ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಮಧ್ಯಂತರ ಜಾಮೀನು ರದ್ದು ಮಾಡಿ ಹೈಕೋರ್ಟ್ ವಿಚಾರಣೆಗೂ ತಡೆ ನೀಡಬೇಕು ಎಂದು ಮನವಿ ಮಾಡಿದರು. ಆದರೆ ಇದಕ್ಕೆ ನಿರಾಕರಿಸಿದ ಕೋರ್ಟ್, ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…