ದೆಹಲಿ : ಕಾನೂನು ಪ್ರಕ್ರಿಯೆಗಳಲ್ಲಿ ಲಿಂಗ ಸಂವೇದನೆಯತ್ತ ಒಂದು ದೊಡ್ಡ ಹೆಜ್ಜೆಯಾಗಿ ಸುಪ್ರೀಂಕೋರ್ಟ್ ಇಂದು (ಬುಧವಾರ) ಜೆಂಡರ್ ಸ್ಟೀರಿಯೊಟೈಪ್‌ಗಳಿಂದ (ಇಂಥಾ ಲಿಂಗದವರು ಹೀಗೀಗೆ ಎನ್ನುವ ದೃಷ್ಟಿಕೋನ) ತುಂಬಿದ ಪದಗಳು ಮತ್ತು ಪದಗುಚ್ಛಗಳನ್ನು ಪಟ್ಟಿ ಮಾಡುವ ಕೈಪಿಡಿಯನ್ನು ಬಿಡುಗಡೆ ಮಾಡಿದೆ.
ನ್ಯಾಯಾಲಯದ ಆದೇಶಗಳಲ್ಲಿ ಇಂಥಾ ಪದ ಬಳಸದಂತೆ ಈ ಕೈಪಿಡಿ ಎಚ್ಚರಿಕೆ ನೀಡುತ್ತದೆ. ‘Handbook On Combating Gender Stereotypes’ ಬಿಡುಗಡೆ ಸಮಾರಂಭದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಹಿಂದಿನ ನ್ಯಾಯಾಲಯದ ತೀರ್ಪುಗಳಲ್ಲಿ ಮಹಿಳೆಯರ ಬಗ್ಗೆ ಬಳಸಲಾದ ಹಲವಾರು ಆಕ್ಷೇಪಾರ್ಹ ಪದಗಳನ್ನು ಉಲ್ಲೇಖಿಸಿದ್ದಾರೆ.
ಈ ಪದಗಳು ಸರಿಯಲ್ಲ. ಈ ಕೈಪಿಡಿಯ ಉದ್ದೇಶವು ಆ ತೀರ್ಪುಗಳನ್ನು ಟೀಕಿಸುವುದು ಅಥವಾ ಅವುಗಳನ್ನು ಅನುಮಾನಿಸುವುದು ಅಲ್ಲ. ಇದು ಜೆಂಡರ್ ಸ್ಟೀರಿಯೊಟೈಪ್‌ಗಳು ಅಜಾಗರೂಕತೆಯಿಂದ ಹೇಗೆ ಶಾಶ್ವತವಾಗಿದೆ ಎಂಬುದನ್ನು ಒತ್ತಿಹೇಳುವುದಾಗಿದೆ ಎಂದು ಅವರು ಹೇಳಿದರು.
ಈ ಸ್ಟೀರಿಯೊಟೈಪ್‌ಗಳನ್ನು ವ್ಯಾಖ್ಯಾನಿಸುವುದು ಮತ್ತು ಅವರಲ್ಲಿ ಜಾಗೃತಿ ಮೂಡಿಸುವುದು ಕೈಪಿಡಿಯ ಗುರಿ. ಮಹಿಳೆಯರ ಬಗ್ಗೆ ರೂಢಿಗತವಾಗಿರುವ ಪದಗಳನ್ನು ಗುರುತಿಸಲು ನ್ಯಾಯಾಧೀಶರಿಗೆ ಇದು ಸಹಾಯ ಮಾಡುತ್ತದೆ. ಕೈಪಿಡಿಯನ್ನು ಸುಪ್ರೀಂಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ಮಾರ್ಚ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ, ಮುಖ್ಯ ನ್ಯಾಯಾಧೀಶರು ಜೆಂಡರ್ ಸ್ಟೀರಿಯೊಟೈಪ್‌ಗಳನ್ನು ಉಪಯೋಗಿಸದಂತೆ ಎಚ್ಚರಿಸುವ ಕೈಪಿಡಿಯ ಬಗ್ಗೆ ಮಾತನಾಡಿದ್ದರು.
ಉದಾಹರಣೆಗೆ, ಮಹಿಳೆಯು ಇನ್ನೊಬ್ಬನ ಜತೆ ಸಂಬಂಧದಲ್ಲಿರುವಾಗ ಆಕೆಯನ್ನು ‘ಉಪಪತ್ನಿ’ ಎಂದು ಉಲ್ಲೇಖಿಸಿರುವ ತೀರ್ಪುಗಳನ್ನು ನಾನು ನೋಡಿದ್ದೇನೆ. ಕೌಟುಂಬಿಕ ಹಿಂಸಾಚಾರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ ಅಡಿಯಲ್ಲಿ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಇದ್ದ ಅರ್ಜಿಗಳಲ್ಲಿ ನೀಡಿದ ತೀರ್ಪುಗಳಲ್ಲಿ ಮಹಿಳೆಯರನ್ನು ‘ಕೀಪ್ಸ್’ ಎಂದು ಕರೆಯಲಾಗಿದೆ ಎಂದು ಕೈಪಿಡಿಯನ್ನು ಸಿದ್ಧಪಡಿಸಲು ಇದ್ದ ಕಾರಣಗಳನ್ನು ಚಂದ್ರಚೂಡ್ ವಿವರಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಅಧಿಕಾರಾವಧಿಯಲ್ಲಿ ಸುಪ್ರೀಂಕೋರ್ಟ್‌ನ ಜೆಂಡರ್ ಸ್ಟೀರಿಯೊಟೈಪ್‌ಗಳನ್ನು ತೊಡೆದುಹಾಕಲು ಕೈಪಿಡಿಯು ಮತ್ತೊಂದು ಪ್ರಗತಿಪರ ಕ್ರಮವಾಗಿದೆ. ಈ ಹಿಂದೆ, ಸುಪ್ರೀಂಕೋರ್ಟ್ ತನ್ನ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಿಗೆ ಭಾಷಾಂತರಿಸುವ ಕಾರ್ಯ ಮಾಡಿತ್ತು.
ನಿನ್ನೆ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಕ್ರಮವನ್ನು ಶ್ಲಾಘಿಸಿದ್ದಾರೆ. ಮೋದಿ ಹೀಗೆ ಹೇಳುತ್ತಿದ್ದಂತೆ ಸಭಿಕರಲ್ಲಿ ಕುಳಿತಿದ್ದ ಮುಖ್ಯ ನ್ಯಾಯಮೂರ್ತಿಗಳು ಕೈಮುಗಿದಿದ್ದು ಕಾಣಿಸಿತು. ಸುಪ್ರೀಂ ಕೋರ್ಟ್ ಇದುವರೆಗೆ ತನ್ನ 9,423 ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಅಪ್‌ಲೋಡ್ ಮಾಡಿದೆ.
ಸರ್ವೋಚ್ಚ ನ್ಯಾಯಾಲಯವು ಅಸ್ತಿತ್ವಕ್ಕೆ ಬಂದ ನಂತರ ಎಲ್ಲಾ ಭಾಷೆಗಳ ಜನರಿಗೆ ತಲುಪಲು ಒಟ್ಟು 35,000 ಪ್ರಮುಖ ನಿರ್ಧಾರಗಳನ್ನು ಮಾಡುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಹಿಂದಿಯ ಜೊತೆಗೆ, ತೀರ್ಪುಗಳು ಈಗ ಸುಪ್ರೀಂಕೋರ್ಟ್ ವೆಬ್‌ಸೈಟ್‌ನಲ್ಲಿ ಒಡಿಯಾ, ಗುಜರಾತಿ, ತಮಿಳು, ಅಸ್ಸಾಮಿ, ಖಾಸಿ, ಗಾರೋ, ಪಂಜಾಬಿ, ನೇಪಾಳಿ ಮತ್ತು ಬಂಗಾಳಿ ಭಾಷೆಗಳಲ್ಲಿ ಲಭ್ಯವಿದೆ. ಶೀಘ್ರದಲ್ಲೇ ಈ ಪಟ್ಟಿಗೆ ಇನ್ನಷ್ಟು ಭಾಷೆಗಳನ್ನು ಸೇರಿಸಲಾಗುವುದು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…