ನವದೆಹಲಿ : ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಸುಪ್ರೀಂ ಕೋರ್ಟ್‌ನಲ್ಲಿ ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ.
16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್.05 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿಯನ್ನು ವಿರೋಧಿಸಿ ಅರ್ಜಿ ಸಲ್ಲಿಸಿದ್ದವರ ಪರವಾಗಿ ಕಪಿಲ್ ಸಿಬಲ್, ಗೋಪಾಲ್ ಸುಬ್ರಹ್ಮಣೀಯಮ್, ರಾಜೀವ್ ಧವನ್, ಜಫರ್ ಶಾ, ದುಷ್ಯಂತ್ ದಾವೆ ವಾದಿಸಿದ್ದರು.
ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ ಎಂದು ಕೋರ್ಟ್ ವೆಬ್ ಸೈಟ್‌ನಲ್ಲಿ ತಿಳಿಸಲಾಗಿದೆ. ಪಂಚ ಸದಸ್ಯ ಪೀಠದಲ್ಲಿ ನ್ಯಾ. ಸಂಜಯ್ ಕಿಶನ್ ಕೌಲ್, ನ್ಯಾ. ಸಂಜೀವ್ ಖನ್ನಾ, ನ್ಯಾ. ಬಿಆರ್ ಗವಾಯಿ ಹಾಗೂ ನ್ಯಾ.ಸೂರ್ಯ ಕಾಂತ್ ಸಹ ಇದ್ದಾರೆ.
ಇತ್ತ ಕೇಂದ್ರ ಸರ್ಕಾರ ದಾಖಲೆ ಮೂಲಕ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು. ಆರ್ಟಿಕಲ್ 370 ರದ್ದಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಾದ ಬದಲಾವಣೆ ಮಾಹಿತಿಯನ್ನೂ ಕೋರ್ಟ್ ಮುಂದೆ ಇಟ್ಟಿತ್ತು. ವಿಶೇಷ ಸ್ಥಾನಮಾನ ರದ್ದತಿಯಿಂದ ಕಾಶ್ಮೀರದಲ್ಲಿ 890 ಕೇಂದ್ರೀಯ ಕಾನೂನು ಅಳವಡಿಸಲಾಗಿದೆ. ಇದರಿಂದ ಮೊದಲು ಹಕ್ಕುಗಳಿಂದ ವಂಚಿತರಾದವರು ಈಗ ಸರ್ಕಾರಿ ಉದ್ಯೋಗಗಳನ್ನು ಪಡೆಯಬಹುದಾಗಿದೆ. ಆಸ್ತಿ ಖರೀದಿಸಬಹುದಾಗಿದೆ. ಇದಲ್ಲದೇ ಅನ್ಯಾಯ, ತಾರತಮ್ಯ ಮಾಡುವ 250 ರಾಜ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಕಾಶ್ಮೀರದಲ್ಲಿ ಕೈಗಾರಿಕಾ ಸ್ಥಾಪನೆಯ ಹಾದಿ ಸುಲಭವಾಗಿದ್ದು, ಹೂಡಿಕೆ ಪರಿಸರ ನಿರ್ಮಾಣವಾಗಿದೆ ಎಂದಿತ್ತು.
2021ರಲ್ಲಿ ಕಾಶ್ಮೀರದಲ್ಲಿ ಒಳನುಸುಳುವಿಕೆ ಪ್ರಮಾಣ ಶೇ. 33ಕ್ಕೆ ಇಳಿಕೆಯಾಗಿದೆ. ಕದನ ವಿರಾಮ ಉಲ್ಲಂಘನೆಯಲ್ಲಿ ಶೇ. 90ರಷ್ಟು ಇಳಿಕೆ, ಶೇ.61ರಷ್ಟು ಭಯೋತ್ಪಾದಕ ಕೃತ್ಯಗಳಲ್ಲಿ ಇಳಿಕೆ ಹಾಗೂ ಉಗ್ರರಿಂದ ಅಪಹರಣಕ್ಕೊಳಗಾಗುವ ಪ್ರಮಾಣ ಶೇ.80 ರಷ್ಟು ಇಳಿಕೆಯಾಗಿದೆ ಎಂದು ಮಾಹಿತಿ ನೀಡಿತ್ತು.
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…