BREAKING NEWS

ಮಣಿಪುರ ವೈರಲ್ ವಿಡಿಯೋ ಕುರಿತು ಕೇಂದ್ರ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ತರಾಟೆ

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಮತ್ತು ಮೇ 4 ರಂದು ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ “ಭಯಾನಕ” ಎಂದು ಆಕ್ರೋಶ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಪೊಲೀಸರು ಏನು ಮಾಡುತ್ತಿದ್ದರು?, ಎಫ್‌ಐಆರ್‌ಗೆ ಸಂಬಂಧಿಸಿದಂತೆ ಇದುವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ವಾಸ್ತವಿಕವಾಗಿ ಪೊಲೀಸರೇ ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಒಪ್ಪಿಸಿರುವುದರಿಂದ ರಾಜ್ಯ ಪೊಲೀಸರು ಈ ವಿಷಯವನ್ನು ತನಿಖೆ ಮಾಡಲು ಬಯಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕಿಡಿ ಕಾರಿದೆ.

ಹಿಂಸಾಚಾರ ಪೀಡಿತ ರಾಜ್ಯದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಲು ನಾಳೆ ಕೇಂದ್ರ ಮತ್ತು ಮಣಿಪುರವನ್ನು ಪ್ರತಿನಿಧಿಸುವ ಕಾನೂನು ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ಅಥವಾ ಮಾಜಿ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ರಚಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವೈರಲ್ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಕ್ಕಾಗಿ ಮಣಿಪುರ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, “ಮೇ 4 ರಂದು ನಡೆದ ಭಯಾನಕ ಘಟನೆಯ ಬಗ್ಗೆ ತಕ್ಷಣ ಎಫ್‌ಐಆರ್ ಏಕೆ ದಾಖಲಿಸಲಿಲ್ಲ ಮತ್ತು ಎಫ್‌ಐಆರ್ ದಾಖಲಿಸಲು ರಾಜ್ಯ ಪೊಲೀಸರಿಗೆ 14 ದಿನಗಳು ಏಕೆ ಬೇಕಾಯಿತು? ಎಂದು ಪ್ರಶ್ನಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ವಿಡಿಯೋದಲ್ಲಿ ತೋರಿಸಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಘಟನೆಯು ಪ್ರತ್ಯೇಕ ಘಟನೆಯಲ್ಲ ಮತ್ತು ಅಂತಹ ಹಲವಾರು ಘಟನೆಗಳು ನಡೆದಿರಬಹು ಎಂದು ಊಹಿಸಿದೆ.

ಮೇ 4ರಂದು ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 18 ರಂದು ಎಫ್ಐಆರ್ ದಾಖಲಾಗಿತ್ತು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕವಷ್ಟೇ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಅಪ್ರಾಪ್ತ ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

1 hour ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

2 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

3 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

3 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

3 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

3 hours ago